ಕುಷ್ಟಗಿ ವಿಧಾನಸಭಾ ಕ್ಷೇತ್ರದ ಪಂಚರತ್ನ ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರನ್ನು ಭದ್ರಾವತಿ ಜೆಡಿಎಸ್ ಪಕ್ಷದ ಯುವ ಮುಖಂಡರು ಹಾಗು ಕಾರ್ಮಿಕ ಸಂಘಟನೆಗಳ ಪ್ರಮುಖರು ಭೇಟಿ ಮಾಡಿ ಹೋರಾಟ ಬೆಂಬಲಿಸುವಂತೆ ಮನವಿ ಮಾಡಿದರು.
ಭದ್ರಾವತಿ, ಜ. ೩೦: ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗ ಕಳೆದ ೧೨ ದಿನಗಳಿಂದ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ.
ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ತಾಲೂಕು ಘಟಕದ ಅಧ್ಯಕ್ಷ ಎಂ.ಎ ಅಜಿತ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಹಾಗು ರಮೇಶ್, ಉಮೇಶ್ ಸುರಗಿತೋಪು, ಪರಮೇಶ್ ಸೇರಿದಂತೆ ಯುವ ಮುಖಂಡರು ಸೋಮವಾರ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಪಂಚರತ್ನ ಕಾರ್ಯಕ್ರಮದ ವೇದಿಕೆಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಹೋರಾಟ ಬೆಂಬಲಿಸುವಂತೆ ಮನವಿ ಮಾಡಿದ್ದು, ಈ ಹಿನ್ನಲೆಯಲ್ಲಿ ಫೆ.೩ರಂದು ಮಧ್ಯಾಹ್ನ ೩ ಗಂಟೆಗೆ ಹೋರಾಟ ಸ್ಥಳಕ್ಕೆ ಆಗಮಿಸಲಿದ್ದಾರೆ.
ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಕಾರ್ಮಿಕ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಸೇರಿದಂತೆ ಕ್ಷೇತ್ರದ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
No comments:
Post a Comment