ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನಲೆಯಲ್ಲಿ ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.
ಭದ್ರಾವತಿ, ಜ. ೨೯: ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಜ.೩೦ರಂದು ಸಿದ್ದರೂಢನಗರದ ಬಸವೇಶ್ವರ ಸಭಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ಜಿಲ್ಲೆಯ ಸಚಿವರು, ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿಣಿ ಸಭೆ ಯಶಸ್ವಿಗೊಳಿಸುವಂತೆ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಕೋರಿದ್ದಾರೆ.
ಸದ್ದಿಲ್ಲದೆ ನಡೆದ ಜಿಲ್ಲಾ ಸಮಿತಿ ಸಭೆ :
ಸೋಮವಾರ ಜಿಲ್ಲಾ ಸಮಿತಿ ಸಭೆ ನಡೆದಿದ್ದು, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಮಾಜಿ ಸದಸ್ಯರಾದ ಎಂ.ಬಿ ಭಾನುಪ್ರಕಾಶ್, ಆರ್.ಕೆ ಸಿದ್ದರಾಮಣ್ಣ, ವಿಭಾಗ ಸಂಘಟನಾ ಕಾರ್ಯದರ್ಶಿ ಗಣೇಶ್‌ರಾವ್, ಸಹ ಕಾರ್ಯದರ್ಶಿ ಎ.ಎನ್ ನಟರಾಜ್, ಜಿಲ್ಲಾ ಪ್ರಭಾರಿ ಮೋನಪ್ಪ ಭಂಡಾರಿ, ಸಹ ಪ್ರಭಾರಿ ಆರ್.ಡಿ ಹೆಗಡೆ, ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗು ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.
ಕಾರ್ಯಕಾರಣಿ ಸಭೆಗೆ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟದ ಬಿಸಿ :
ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಳೆದ ೧೧ ದಿನಗಳಿಂದ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರ ವಿರುದ್ಧ ಅಸಮಾಧಾನಗೊಂಡಿದ್ದು, ಸೋಮವಾರ ನಡೆಯಲಿರುವ ಕಾರ್ಯಕಾರಣಿ ಸಭೆಗೆ ಇವರ ಹೋರಾಟದ ಬಿಸಿ ತಟ್ಟುವ ಸಾಧ್ಯತೆ ಕಂಡು ಬರುತ್ತಿದೆ. ಕಳೆದ ಭಾನುವಾರ ಸಹ ಗುತ್ತಿಗೆ ಕಾರ್ಮಿಕರು ಸಂಸದರ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುವ ಮೂಲಕ ನಗರಕ್ಕೆ ಪ್ರವೇಶಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದರು.
No comments:
Post a Comment