ಭದ್ರಾವತಿ ಹೊಸಮನೆ ನಿವಾಸಿ, ಹಿರಿಯ ಕ್ರೀಡಾಪಟು ಬಿ. ನಂಜೇಗೌಡರು ೪ನೇ ಕರ್ನಾಟಕ ರಾಜ್ಯ ಮಾಸ್ಟರ್ ಗೇಮ್ಸ್ ಪಂದ್ಯಾವಳಿ ಭಾಗವಹಿಸಿ ೨ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಜ. ೨೨: ನಗರದ ಹೊಸಮನೆ ನಿವಾಸಿ, ಹಿರಿಯ ಕ್ರೀಡಾಪಟು ಬಿ. ನಂಜೇಗೌಡರು ೪ನೇ ಕರ್ನಾಟಕ ರಾಜ್ಯ ಮಾಸ್ಟರ್ ಗೇಮ್ಸ್ ಪಂದ್ಯಾವಳಿ ಭಾಗವಹಿಸಿ ೨ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕರ್ನಾಟಕ ಮಾಸ್ಟರ‍್ಸ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೭೫ ವರ್ಷ ಮೇಲ್ಪಟ್ಟವರ ವಯೋಮಾನದ ವಿಭಾಗದ ೧೦೦ಮೀ. ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗು ಉದ್ದ ಜಿಗಿತದಲ್ಲಿ ೨.೫೯ ಮೀಟರ್ ಗುರಿ ಸಾಧಿಸುವ ಮೂಲಕ ದ್ವಿತೀಯ ಬಹುಮಾನ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ನಂಜೇಗೌಡರು ರಾಷ್ಟ್ರ, ರಾಜ್ಯ ಹಾಗು ಜಿಲ್ಲಾಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಇದುವರೆಗೂ ಸುಮಾರು ೪೦ಕ್ಕೂ ಹೆಚ್ಚು ಪದಕಗಳನ್ನು ಪಡೆದುಕೊಂಡಿದ್ದಾರೆ. ಯುವ ಸಮುದಾಯಕ್ಕೆ ಸ್ಪೂರ್ತಿದಾಯಕರಾಗಿದ್ದಾರೆ. ಇವರ ಕ್ರೀಡಾ ಸಾಧನೆಗೆ ಕ್ರೀಡಾಭಿಮಾನಿಗಳು ಸೇರಿದಂತೆ ನಗರದ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
No comments:
Post a Comment