ಭದ್ರಾವತಿ, ಜ. ೧೨ : ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಈ ಬಾರಿ ವಿಶೇಷವಾಗಿ ಜ.೧೫ರಂದು ಸಂಕ್ರಾಂತಿ ಸಂಭ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ನಂದಿ ದೇವಸ್ಥಾನದ ಮುಂಭಾಗ ಬೆಳಿಗ್ಗೆ ೬ಗಂಟೆಗೆ ವಿಶೇಷ ಆಕರ್ಷಣೆಯಾಗಿ ಹೋರಿಗಳ ಕಿಚ್ಚಾಯಿಸುವ ಕಾರ್ಯಕ್ರಮ ನಡೆಯಲಿದ್ದು, ೬.೩೦ಕ್ಕೆ ಪೊಂಗಲ್ ಪೂಜೆ, ೯ ಗಂಟೆಗೆ ಗೋವಿನ ಪೂಜೆ, ೧೦ಕ್ಕೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.
ನಂತರ ಹೊಳೆಹೊನ್ನೂರು ಸರ್ಕಾರಿ ಪ್ರೌಢಶಾಲೆಯ ರವಿಕಿರಣ್ ಅವರಿಂದ ದೈವ ನೃತ್ಯರೂಪಕ, ಚೌಡೇಶ್ವರಿ ಮಹಿಳಾ ಮಂಡಳಿಯಿಂದ ಕೋಲಾಟ, ದಿವಾಕರ ಮತ್ತು ತಂಡದಿಂದ ಹಾಗು ವೀರಾಂಜನೇಯ ಭಜನಾ ಮಂಡಳಿ ವತಿಯಿಂದ ಜಾನಪದ ಗೀತೆ, ಹೊಳೆಗಂಗೂರು ಸರ್ಕಾರಿ ಪ್ರೌಢ ಶಾಲೆ ವತಿಯಿಂದ ಕೋಲಾಟ ಹಾಗು ಸೋಂಪಾನಾಯ್ಕ ಮತ್ತು ತಂಡದವರಿಂದ ಬಣಜಾರ್ ಶೈಲಿಯ ಕೋಲಾಟ ಸೇರಿದಂತೆ ಜಾನಪದ ಕಾರ್ಯಕ್ರಮಗಳು ನಡೆಯಲಿವೆ.
ಗ್ರಾಮೀಣ ಕ್ರೀಡಾಕೂಟ :
ಸಂಕ್ರಾಂತಿ ಸಂಭಮದ ಅಂಗವಾಗಿ ಜ.೧೪ರಂದು ಬೆಳಿಗ್ಗೆ ೧೧ ಗಂಟೆಗೆ ಗೋಲ್ಡನ್ ಜ್ಯೂಬಿಲಿ ಫೀಲ್ಡ್‌ನಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪುರುಷರ ವಿಭಾಗದಲ್ಲಿ ಹಗ್ಗ ಜಗ್ಗಾಟ, ಲಗೋರಿ ಹಾಗು ಮಹಿಳೆಯರ ವಿಭಾಗದಲ್ಲಿ ನೀರು ತುಂಬಿಸುವ ಆಟ ಮತ್ತು ಎಷ್ಟಪ್ಪ ಎಷ್ಟು ಸ್ಪರ್ಧೆಗಳು ಹಾಗು ಮಕ್ಕಳ ವಿಭಾಗದಲ್ಲಿ ಗೋಣಿ ಚೀಲದ ಆಟ, ಕುಂಟೆ ಬಿಲ್ಲೆ ಸ್ಪರ್ಧೆಗಳು ನಡೆಯಲಿವೆ. ವಿಶೇಷವಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಜ.೧೩ರ ಸಂಜೆ ೬ ಗಂಟೆಯೊಳಗಾಗಿ ಮೊ: ೯೭೩೧೩೧೬೪೦೦ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳತಕ್ಕದ್ದು.
No comments:
Post a Comment