ಭದ್ರಾವತಿ, ಜ. ೨೪: ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಖಲಂದರ್ ನಗರದ ಅಬ್ದುಲ್ ರೆಹಮಾನ್ ಎಂಬುವರು ರಾತ್ರಿ ಮನೆಯ ಕಾಂಪೌಂಡ್‌ನಲ್ಲಿ ರಾಯಲ್ ಎನ್ ಫೀಲ್ಡ್ ಬೈಕನ್ನು ನಿಲ್ಲಿಸಿದ್ದು, ಬೆಳಿಗ್ಗೆ ಬೈಕ್ ಕಳುವಾಗಿರುವುದು ಕಂಡು ಬಂದಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment