ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ವಿರುದ್ಧ ಜ.೧೦ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಕುರಿತು ಭದ್ರಾವತಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬಂಜಾರ ರೈತರ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ ಮಾಹಿತಿ ನೀಡಿದರು.
ಭದ್ರಾವತಿ, ಜ. ೭: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ವಿರುದ್ಧ ಜ.೧೦ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯಲ್ಲಿ ಬಣಜಾರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಸಬೇಕೆಂದು ಬಂಜಾರ ರೈತರ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ ಮನವಿ ಮಾಡಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅಸಂವಿಧಾನಿಕ ಹಾಗು ಅವೈಜ್ಞಾನಿಕವಾಗಿ ಕೂಡಿದೆ. ರಾಜ್ಯ ಸರ್ಕಾರ ಈ ವರದಿಯನ್ನು ಸಾರ್ವಜನಿಕವಾಗಿ ಚರ್ಚಿಸದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮುಂದಾಗಿರುವುದು ಖಂಡನೀಯವಾಗಿದೆ ಎಂದರು.
ಆಯೋಗದ ವರದಿ ತಕ್ಷಣ ಕೈ ಬಿಡಬೇಕು. ವರದಿಯಲ್ಲಿನ ಸಾಧಕ-ಬಾಧಕಗಳ ಕುರಿತು ಸಾರ್ವಜನಿಕವಾಗಿ ಚರ್ಚಿಸಬೇಕು. ಎಲ್ಲಾ ಸಮುದಾಯಗಳಿಗೂ ಸಂವಿಧಾನ ಬದ್ಧವಾಗಿ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಣಜಾರ, ಭೋವಿ ಸೇರಿದಂತೆ ಶೋಷಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಮೀಸಲಾತಿ ಸಂರಕ್ಷಣಾ ಒಕ್ಕೂಟ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೇಮ್‌ಕುಮಾರ್, ಬಂಜಾರ ಪೀಠ ಅಭಿವೃದ್ಧಿ ಸಮಿತಿ ನಿರ್ದೇಶಕ ರಮೇಶ್‌ನಾಯ್ಕ, ಬಂಜಾರ ಯುವಕರ ಸಂಘದ ಗೌರವಾಧ್ಯಕ್ಷ ಶಂಕ್ರನಾಯ್ಕ, ಮಂಜ್ಯಾನಾಯ್ಕ, ಹಿರಿಯೂರು ಮಲ್ಲಿಕಾ, ಭೋವಿ ಸಮಾಜದ ಅಧ್ಯಕ್ಷ ಬಿ.ಟಿ ನಾಗರಾಜ್, ಶಿವು ಪಾಟೀಲ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment