ಭದ್ರಾವತಿ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ೪ನೇ ವರ್ಷದ ವಾರ್ಷಿಕೋತ್ಸವ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಜ. ೧೭ : ಸಂಘಟನೆಯಲ್ಲಿ ಒಗ್ಗಟ್ಟು ಬಹಳ ಮುಖ್ಯವಾಗಿದ್ದು, ವೀರಶೈವ ಲಿಂಗಾಯತ ಮಹಿಳೆಯರು ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಮಂಗಳವಾರ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ೪ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಎಲ್ಲರೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದರು.
ಸಮಾಜದ ಅಧ್ಯಕ್ಷೆ ಆರ್.ಎಸ್ ಶೋಭಾ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಚ್. ಭುವನೇಶ್ವರ್, ನಗರಸಭೆ ಸ್ಥಾಯಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ಅನುಪಮ ಚನ್ನೇಶ್, ಟಿಪ್ಪುಸುಲ್ತಾನ್, ಸಮಾಜದ ಗೌರವಾಧ್ಯಕ್ಷೆ ಗೌರಮ್ಮ ಶಂಕ್ರಯ್ಯ, ಉಪಾಧ್ಯಕ್ಷೆ ಭಾಗ್ಯ ನಿಜಗುಣ, ನಿರ್ದೇಶಕಿ ಎಸ್. ಗುಣ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ನಾಗರತ್ನ ವಾಗೀಶ್‌ಕೋಠಿ ವಾರ್ಷಿಕ ವರದಿ ಮಂಡಿಸಿದರು. ರೂಪ ನಾಗರಾಜ್ ಸ್ವಾಗತಿಸಿದರು. ಉಷಾ ವೀರಶೇಖರ್ ನಿರೂಪಿಸಿದರು. ವೀರಶೈವ ಲಿಂಗಾಯತ ಮಹಿಳಾ ಸಮಾಜದ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸಮಾಜದ ಸದಸ್ಯರು ಪಾಲ್ಗೊಂಡಿದ್ದರು.
No comments:
Post a Comment