ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡು ಲೋಕಾರ್ಪಣೆಗೆ ಎದುರು ನೋಡುತ್ತಿರುವ ವಿಮಾನ ನಿಲ್ದಾಣದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಿಡಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಬುಧವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜ. ೧೮: ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡು ಲೋಕಾರ್ಪಣೆಗೆ ಎದುರು ನೋಡುತ್ತಿರುವ ವಿಮಾನ ನಿಲ್ದಾಣದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಿಡಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಬುಧವಾರ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರು ಮಾತನಾಡಿ, ಫೆ.೧೨ರಂದು ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿಗಳು ವಿಮಾನ ನಿಲ್ದಾಣ ಲೋಕಾರ್ಪಣೆಗೆ ಮುಂದಾಗಿರುವುದು ಶ್ಲಾಘನೀಯ. ಆದರೆ ಕನ್ನಡಿಗರಿಗೆ, ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಇರುವುದಿಲ್ಲ. ರಾಜ್ಯದಲ್ಲಿರುವ ಎಲ್ಲಾ ವಿಮಾನ ನಿಲ್ದಾಣ ಹಾಗೂ ಎಲ್ಲಾ ಕ್ಷೇತ್ರಗಳಲ್ಲಿ ಹೊರ ರಾಜ್ಯದವರೇ ಆವರಿಸಿ ಕೊಂಡಿದ್ದಾರೆ. ಇದರಿಂದಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ತಕ್ಷಣ ಎಚ್ಚೆತ್ತುಕೊಂಡು ಕನ್ನಡಿಗರಿಗೆ, ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜ್ ರಾವ್ ಶಿಂಧೆ, ಯುವ ಘಟಕದ ಅಧ್ಯಕ್ಷ ಆರ್. ತ್ಯಾಗರಾಜ್ ಅರಳಿಹಳ್ಳಿ, ಕಾರ್ಯದರ್ಶಿ ಚಿಂಪಯ್ಯ, ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಉಪಾಧ್ಯಕ್ಷ ಮುರಳಿ, ಜಿಲ್ಲಾ ಉಪಾಧ್ಯಕ್ಷ ಸಂತೋಷ್(ಶಾಮಿಯಾನ), ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಶರತ್ ಕುಮಾರ್, ಸುರೇಶ್, ವಿನೋದ್‌ಕುಮಾರ್, ತೀರ್ಥಕುಮಾರ್, ರಾಜೇಂದ್ರ, ಆನಂದ್, ಮಲ್ಲಿಕಾರ್ಜುನ, ವೆಂಕಟೇಶ್, ಸಿಕಂದರ್, ಸುಮಿತ್ರಮ್ಮ, ವಾಣಿ, ಬಾನುಪ್ರಿಯ, ಲಲಿತಮ್ಮ ಮತ್ತು ಐಶ್ವರ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment