ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು
ಭದ್ರಾವತಿ, ಜ. ೨೯ : ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿಗೆ ಜ.೩೦ ಮತ್ತು ೩೧ರಂದು ಎರಡು ದಿನ ನ್ಯಾಕ್ ಪೀರ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಸುಮಾರು ೬ ದಶಕಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ನಗರದ ಪ್ರಮುಖ ಕಾಲೇಜುಗಳಲ್ಲಿ ಒಂದಾಗಿದ್ದು, ಹಲವಾರು ವರ್ಷಗಳಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಕಾಲೇಜಿಗೆ ಭೇಟಿ ನೀಡಿದ್ದ ನ್ಯಾಕ್ ಪೀರ್ ತಂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಂಡದ ಪರಿಶೀಲನೆ ನಂತರ ಕಾಲೇಜಿ ಬಿ+ ಮಾನ್ಯತೆ ಲಭಿಸಿತ್ತು. ಇದೀಗ ಎರಡು ದಿನಗಳ ಕಾಲ ತಂಡ ಪರಿಶೀಲನೆ ನಡೆಸಲಿದೆ. ಈ ಕುರಿತು ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ತಿಳಿಸಿದ್ದಾರೆ.
No comments:
Post a Comment