ಭದ್ರಾವತಿಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.
ಭದ್ರಾವತಿ, ಫೆ. ೮ : ಮಗಳ ಶಿಕ್ಷಣಕ್ಕೆ ಶುಲ್ಕ ಪಾವತಿಸಿದ ವಿಚಾರಕ್ಕೂ ಸಹ ಇಡಿ ಯಿಂದ ನೋಟಿಸ್ ನೀಡಲಾಗಿದ್ದು, ನನಗೆ ವಿನಾಕಾರಣ ಕಿರುಕುಳ ನೀಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಅವರು ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದೆಂಬ ದುರುದ್ದೇಶದಿಂದ ಇಡಿ ಯಿಂದ ನನ್ನ ಮಗಳಿಗೆ ನೋಟಿಸ್ ನೀಡಲಾಗಿದೆ. ಫೆ.೨೭ರಂದು ವಿಚಾರಣೆಗೆ ನನ್ನ ಮಗಳು ತೆರಳಲಿದ್ದು, ಇದರಿಂದ ನನಗೆ ತುಂಬಾ ಬೇಸರವಾಗುತ್ತಿದೆ. ನನ್ನ ಹಾಗು ಕುಟುಂಬ ಸದಸ್ಯರ ಮೇಲೆ ಪದೇ ಪದೇ ಇಡಿ ದಾಳಿ ನಡೆಸುತ್ತಿರುವುದು ಮನಸ್ಸಿಗೆ ತುಂಬಾ ಅಸಮಾಧಾನ ಉಂಟು ಮಾಡುತ್ತಿದೆ ಎಂದರು.
ಬಿಎಸ್‌ವೈ ಕುಟುಂಬಕ್ಕೆ ಮತ ಕೇಳುವ ನೈತಿಕತೆ ಇಲ್ಲ:
ಚುನಾವಣೆ ಸಂದರ್ಭದಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದ್ದರು. ಆದರೆ ಅವರು ಕಾರ್ಖಾನೆ ಪುನಶ್ಚೇತನಗೊಳಿಸುವಲ್ಲಿ, ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಜಿಲ್ಲೆಯಲ್ಲಿ ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆಂದರು.
No comments:
Post a Comment