ಭದ್ರಾವತಿ, ಫೆ. ೧೦: ಕ್ರೈಸ್ತ ಸಮಾಜದ ಯುವ ಮುಖಂಡ, ಅಂಜನೇಯ ಅಗ್ರಹಾರ ನಿವಾಸಿ ಅಮೋಸ್‌ರನ್ನು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರಾಗಿ ನೇಮಕಗೊಳಿಸಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ನೇಮಕ ಆದೇಶ ಹೊರಡಿಸಿದ್ದು, ಜೆಡಿಎಸ್ ಪಕ್ಷದ ಸರ್ಕಾರದ ಸಾಧನೆಗಳು ಹಾಗು ಪಕ್ಷದ ಕಾರ್ಯಕ್ರಮಗಳ ಕುರಿತು ಸುದ್ದಿ ಮಾಧ್ಯಮಗಳಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ಅಮೋಸ್‌ರವರು ಈ ಹಿಂದೆ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಸಹ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದರು. ಇವರನ್ನು ಜೆಡಿಎಸ್ ಪಕ್ಷದ ಸ್ಥಳೀಯ ಮುಖಂಡರು, ಕ್ರೈಸ್ತ ಸಮಾಜದ ಪ್ರಮುಖರು, ಸ್ನೇಹಿತರು ಅಭಿನಂದಿಸಿದ್ದಾರೆ.
No comments:
Post a Comment