ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಶುಕ್ರವಾರ ೨೩ನೇ ದಿನ ಪೂರೈಸಿತು. ಸಂಜೆ ನ್ಯೂಟೌನ್, ನ್ಯೂಕಾಲೋನಿ, ಆಂಜನೇಯ ಅಗ್ರಹಾರ ಸೇರಿದಂತೆ ವಿವಿಧೆಡೆ ಜಾಥಾ ನಡೆಸಿ ಕರಪತ್ರಗಳನ್ನು ವಿತರಿಸಿದರು.
ಭದ್ರಾವತಿ, ಫೆ. ೧೦ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಶುಕ್ರವಾರ ೨೩ನೇ ದಿನ ಪೂರೈಸಿತು. ಸಂಜೆ ನ್ಯೂಟೌನ್, ನ್ಯೂಕಾಲೋನಿ, ಆಂಜನೇಯ ಅಗ್ರಹಾರ ಸೇರಿದಂತೆ ವಿವಿಧೆಡೆ ಜಾಥಾ ನಡೆಸಿ ಕರಪತ್ರಗಳನ್ನು ವಿತರಿಸಿದರು.
ಗುತ್ತಿಗೆ ಕಾರ್ಮಿಕರ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಈ ನಡುವೆ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಇದೀಗ ಹೋರಾಟಕ್ಕೆ ಕ್ಷೇತ್ರದ ಸಮಸ್ತ ಜನರ ಬೆಂಬಲ ಪಡೆದುಕೊಳ್ಳಲು ಮುಂದಾಗಿವೆ. ಈ ಹಿನ್ನಲೆಯಲ್ಲಿ ಕಳೆದ ೨ ದಿನಗಳಿಂದ ಒಂದೊಂದು ವ್ಯಾಪ್ತಿಯಲ್ಲಿ ಜಾಥಾ ನಡೆಸುವ ಮೂಲಕ ಕರಪತ್ರಗಳನ್ನು ವಿತರಿಸಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುತ್ತಿದೆ.
ಸಂಜೆ ಹೋರಾಟ ಸ್ಥಳದಿಂದ ಆರಂಭಗೊಂಡ ಜಾಥಾ ವಿಐಎಸ್‌ಎಲ್ ಕ್ರೀಡಾಂಗಣ ರಸ್ತೆಯಲ್ಲಿ ಸಾಗಿ ಎಸ್‌ಎವಿ ವೃತ್ತ, ಬೆಣ್ಣೆ ಕೃಷ್ಣ ಸರ್ಕಲ್, ಆಂಜನೇಯ ಅಗ್ರಹಾರ ಮುಖ್ಯರಸ್ತೆಯಲ್ಲಿ ಸಾಗಿ ಉಂಬ್ಳೆಬೈಲು ರಸ್ತೆ ವಿದ್ಯಾಮಂದಿರ ಮೂಲಕ ಜಯಶ್ರೀ ವೃತ್ತ ಕೊನೆಯಲ್ಲಿ ಹೋರಾಟ ಸ್ಥಳ ತಲುಪಿತು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು, ಮಹಿಳೆಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವಿಐಎಸ್‌ಎಲ್ ಉಳಿಸಲು ಪ್ರಧಾನ ಮಂತ್ರಿಗೆ ಮನವಿ :
ಸೊರಬ ತಾಲೂಕಿನ ಆನವಟ್ಟಿ ಗ್ರಾಮದ ಯುವ ಜನತೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ಸಂಬಂಧ ಪ್ರಧಾನ ಮಂತ್ರಿಗೆ ಶುಕ್ರವಾರ ಉಪ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದೆ.
ದೇಶದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ ವಿಐಎಸ್‌ಎಲ್ ಕಾರ್ಖಾನೆ ದೇಶದ ಅಭಿವೃದ್ಧಿಯಲ್ಲಿ ಗಣನೀಯವಾದ ಕೊಡುಗೆ ನೀಡಿದ್ದು, ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗದ ಆಸರೆಯಾಗಿದೆ. ಈ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಪುನಶ್ಚೇತನಗೊಳಿಸುವಂತೆ ಕೋರಲಾಗಿದೆ.
No comments:
Post a Comment