ಭದ್ರಾವತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗ ನೂತನವಾಗಿ ನಿರ್ಮಿಸಲಾಗಿರುವ ಬಿಜೆಪಿ ಪಕ್ಷದ ಕಾರ್ಯಾಲಯ ಹಾಗು ಪೇಜ್ ಪ್ರಮುಖರ ಮತ್ತು ಹಿತೈಷಿಗಳ ಸಮಾವೇಶ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ಉದ್ಘಾಟಿಸಿದರು.
ಭದ್ರಾವತಿ, ಫೆ. ೫ : ಈ ಬಾರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದ್ದು, ಈ ನಿಟ್ಟಿನಲ್ಲಿ ಪಕ್ಷ ಕಾರ್ಯಪ್ರವೃತ್ತವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ಹೇಳಿದರು.
ಅವರು ಭಾನುವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗ ನೂತನವಾಗಿ ನಿರ್ಮಿಸಲಾಗಿರುವ ಪಕ್ಷದ ಕಾರ್ಯಾಲಯ ಹಾಗು ಪೇಜ್ ಪ್ರಮುಖರ ಮತ್ತು ಹಿತೈಷಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಹಿಂದುತ್ವದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ, ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರಾಜ್ಯ ಸರ್ಕಾರದ ಯೋಜನೆಗಳು ಹಾಗು ಜಿಲ್ಲೆಯಲ್ಲಿ ಜಾತ್ಯಾತೀತ ಮನೋಭಾವದೊಂದಿಗೆ ಕ್ರಿಯಾಶೀಲರಾಗಿರುವ ಸಂಸದ ಬಿ.ವೈ ರಾಘವೇಂದ್ರರವರ ಅಭಿವೃದ್ಧಿ ಯೋಜನೆಗಳು ಈ ಬಾರಿ ಗೆಲುವಿಗೆ ಪೂರಕವಾಗಿ ಎಂದರು.
ಈ ಬಾರಿ ಕ್ಷೇತ್ರದಲ್ಲಿ ಪಕ್ಷವನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸಲಾಗುತ್ತಿದ್ದು, ಕ್ಷೇತ್ರದಲ್ಲಿ ಚುನಾವಣೆಯನ್ನು ಸಮರ್ಥ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪೂರಕ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಕ್ಷದ ಸೇವಾಕರ್ತರ ಕ್ರಿಯಾಶೀಲತೆ ಪರಿಣಾಮವಾಗಿ ಕೆಲವೇ ಕೆಲವು ದಿನಗಳಲ್ಲಿ ನೂತನ ಕಛೇರಿ ನಿರ್ಮಾಣಗೊಂಡಿದೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಪವಿತ್ರ ರಾಮಯ್ಯ, ಎಂ.ಬಿ ಭಾನುಪ್ರಕಾಶ್, ಎಸ್. ದತ್ತಾತ್ರಿ, ಎಸ್.ಎಸ್ ಜ್ಯೋತಿಪ್ರಕಾಶ್, ಎ.ಎನ್ ನಟರಾಜ್, ಶಿವರಾಜ್, ಬಿ.ಕೆ ಶ್ರೀನಾಥ್, ಎನ್.ಡಿ ಸತೀಶ್, ಎಂ.ಬಿ ಹರಿಕೃಷ್ಣ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment