ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ಸಂಬಂಧ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಭಾನುವಾರ ೩೨ನೇ ದಿನ ಪೂರೈಸಿತು. ಈ ನಡುವೆ ಕಾರ್ಮಿಕರ ನಿಯೋಗ ಪ್ರಧಾನಿ ಮಂತ್ರಿಗಳ ಮನವೊಲಿಸಲು ಉಡುಪಿ ಪೇಜಾವರ ಶ್ರೀಗಳ ಮೊರೆ ಹೋಗಿದ್ದಾರೆ.
ಭದ್ರಾವತಿ, ಫೆ. ೧೯ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ಸಂಬಂಧ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಭಾನುವಾರ ೩೨ನೇ ದಿನ ಪೂರೈಸಿತು. ಈ ನಡುವೆ ಕಾರ್ಮಿಕರ ನಿಯೋಗ ಪ್ರಧಾನಿ ಮಂತ್ರಿಗಳ ಮನವೊಲಿಸಲು ಉಡುಪಿ ಪೇಜಾವರ ಶ್ರೀಗಳ ಮೊರೆ ಹೋಗಿದ್ದಾರೆ.
ಈಗಾಗಲೇ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿಯವರಿಗೂ, ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ ಗುರೂಜೀಯವರಿಗೂ ಮನವಿ ಸಲ್ಲಿಸಲಾಗಿದೆ.
ಭಾನುವಾರ ಉಡುಪಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು ಪ್ರತಿಕ್ರಿಯಿಸಿ ಸೋಮವಾರ ಉಡುಪಿಗೆ ಆಗಮಿಸುತ್ತಿರುವ ಭಾರತೀಯ ಜನತಾಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ(ಜೆ.ಪಿ ನಡ್ಡಾ)ರವರೊಂದಿಗೆ ಚರ್ಚಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಕಾರ್ಮಿಕರ ನಿಯೋಗದಲ್ಲಿ ಪ್ರಮುಖರಾದ ನರಸಿಂಹಚಾರ್, ಅಮೃತ್, ಚಂದ್ರಕಾಂತ್, ರಾಕೇಶ್, ಅರುಣ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗುತ್ತಿಗೆ ಕಾರ್ಮಿಕರ ೩೩ನೇ ದಿನದ ಹೋರಾಟಕ್ಕೆ ಉಡುಪಿ ಪೇಜಾವರ ಶ್ರೀಗಳ ಬೆಂಬಲ :
ಉಡುಪಿ ಪೇಜಾವರ ಶ್ರೀಗಳು ಸೋಮವಾರ ನಗರಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ೩ ಗಂಟೆಗೆ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಆಗಮಿಸಲಿದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ಸೂಚಿಸಿ ಮಾತನಾಡಲಿದ್ದಾರೆ.
No comments:
Post a Comment