ವರುಣ್‌ಗೌಡ
ಭದ್ರಾವತಿ, ಫೆ. ೧೧: ಒಕ್ಕಲಿಗ ಸಮಾಜದ ಯುವ ಮುಖಂಡ, ಕಾಗದನಗರ ವಾರ್ಡ್ ನಂ. ೬ರ ನಿವಾಸಿ ವರುಣ್‌ಗೌಡರನ್ನು ಯುವ ಕಾಂಗ್ರೆಸ್ ರಾಜ್ಯ ವಕ್ತಾರರಾಗಿ ನೇಮಕಗೊಳಿಸಲಾಗಿದೆ.
ಹಳೇನಗರದ ಕನಕಮಂಟಪ ಮೈದಾನದಲ್ಲಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ ಶ್ರೀನಿವಾಸ್‌ರವರು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸೂಚನೆ ಮೇರೆಗೆ ವರುಣ್‌ಗೌಡರನ್ನು ಯುವ ಕಾಂಗ್ರೆಸ್ ರಾಜ್ಯ ವಕ್ತಾರರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿನ ಸಾಧನೆಗಳು ಹಾಗೂ ಪಕ್ಷದ ಕಾರ್ಯಕ್ರಮಗಳ ಕುರಿತು ಸುದ್ದಿ ಮಾಧ್ಯಮಗಳಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ರಾಜ್ಯ ವಕ್ತಾರರಾಗಿ ನೇಮಕಗೊಂಡಿರುವ ವರುಣ್‌ಗೌಡರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಪಕ್ಷದ ನಗರ ಹಾಗು ಗ್ರಾಮಾಂತರ ಘಟಕದ ಅಧ್ಯಕ್ಷರು, ಮುಖಂಡರು ಅಭಿನಂದಿಸಿದ್ದಾರೆ.
No comments:
Post a Comment