ಭದ್ರಾವತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಸುಮಾರು ೩೦,೦೦೦ ಹಣ ಕಳೆದುಕೊಂಡಿದ್ದ ಮಹಿಳೆಗೆ ಪುನಃ ಹಣ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ನಡೆದಿದೆ.
ಭದ್ರಾವತಿ, ಫೆ. ೧೪ : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಸುಮಾರು ೩೦,೦೦೦ ಹಣ ಕಳೆದುಕೊಂಡಿದ್ದ ಮಹಿಳೆಗೆ ಪುನಃ ಹಣ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ನಡೆದಿದೆ.
ತಾಲೂಕಿನ ಕಾಡಿನಂಚಿನಲ್ಲಿರುವ ಬಂಡಿಗುಡ್ಡ ಗ್ರಾಮಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಯಿಷಮ್ಮ ಎಂಬ ಮುಸ್ಲಿಂ ಮಹಿಳೆಯೊಬ್ಬರು ಬಂಡಿಗುಡ್ಡದಿಂದ ನಗರಕ್ಕೆ ಪ್ರಯಾಣ ಬೆಳೆಸಿದ್ದು, ಈ ಅವಧಿಯಲ್ಲಿ ಸುಮಾರು ೩೦,೦೦೦ ರು. ನಗದು ಹಣ ಕಳೆದುಕೊಂಡಿದ್ದಾರೆ. ಕಳೆದುಕೊಂಡ ಹಣ ಬಸ್‌ನಲ್ಲಿಯೇ ನಿರ್ವಾಹಕ ರವಿ ಅವರಿಗೆ ಪತ್ತೆಯಾಗಿದ್ದು, ಹಣ ಕಳೆದುಕೊಂಡ ಮಹಿಳೆಯನ್ನು ಪತ್ತೆ ಮಾಡಿ ನಗರದ ಮುಖ್ಯಬಸ್ ನಿಲ್ದಾಣದಲ್ಲಿ ಸರ್.ಎಂ ವಿಶ್ವೇಶ್ವರಾಯನವರ ಪ್ರತಿಮೆ ಬಳಿ ನಿರ್ವಾಹಕ ರವಿ, ಚಾಲಕ ರಾಜು ಮತ್ತು ಸಂಚಾರಿ ನಿಯಂತ್ರಕ ಪುರುಷೋತ್ತಮ್ ಹಣ ಹಿಂದಿರುಗಿಸಿದರು. ಪ್ರಾಮಾಣಿಕತೆ ಮೆರೆದಿರುವ ಸಿಬ್ಬಂದಿ ವರ್ಗವನ್ನು ಕೆಎಸ್‌ಆರ್‌ಟಿಸಿ ಭದ್ರಾವತಿ ಘಟಕ ಅಭಿನಂದಿಸಿದೆ.
No comments:
Post a Comment