ಭದ್ರಾವತಿ.ಕಾಂ (bhadravathi.com) ಅಂತರ್ಜಾಲದ ಮೂಲಕ ಹೋರಾಟ : ೨೩೧ ಮಂದಿ ಬೆಂಬಲ
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ೨೮ನೇ ದಿನದ ಅನಿರ್ಧಿಷ್ಟಾವಧಿ ಹೋರಾಟಕ್ಕೆ ನಗರದ ಎಲ್ಲಾ ಕ್ರೈಸ್ತ ಸಭೆಗಳು ಮತ್ತು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿ ಬುಧವಾರ ಸಂಜೆ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದವು.
ಭದ್ರಾವತಿ, ಫೆ. ೧೫ : ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ೨೮ನೇ ದಿನದ ಅನಿರ್ಧಿಷ್ಟಾವಧಿ ಹೋರಾಟಕ್ಕೆ ನಗರದ ಎಲ್ಲಾ ಕ್ರೈಸ್ತ ಸಭೆಗಳು ಮತ್ತು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿ ಬುಧವಾರ ಸಂಜೆ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದವು.
ಪ್ರತಿಭಟನೆ ನೇತೃತ್ವವಹಿಸಿದ್ದ ಸೆಲ್ವರಾಜ್ ಮಾತನಾಡಿ, ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸುವ ಜೊತೆಗೆ ಯಾವುದೇ ರೀತಿಯ ಹೋರಾಟಕ್ಕೂ ಕ್ರೈಸ್ತ ಸಮುದಾಯದವರು ಸಹ ಸಿದ್ದರಾಗಿದ್ದು, ನಿಮ್ಮ ಬೇಡಿಕೆಗಳು ನಮ್ಮ ಬೇಡಿಕೆಗಳಾಗಿವೆ. ಸರ್ಕಾರ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು. ೧೦೫ ವರ್ಷಗಳ ಇತಿಹಾಸವಿರುವ ಈ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡುವ ಜೊತೆಗೆ ಉದ್ಯೋಗ ಕಲ್ಪಿಸಿಕೊಡಬೇಕೆಂದು ಆಗ್ರಹಿಸಲಾಗುವುದು. ಅಲ್ಲದೆ ಈ ಸಂಬಂಧ ಪ್ರಧಾನಮಂತ್ರಿ, ಕೇಂದ್ರ ಕೈಗಾರಿಕಾ ಸಚಿವರಿಗೆ ಹಾಗು ರಾಜ್ಯದ ಎಲ್ಲಾ ಸಂಸದರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಪ್ರತಿಭಟನೆ ಆರಂಭಕ್ಕೂ ಮೊದಲು ಯಶಸ್ವಿಗಾಗಿ ಧರ್ಮಗುರುಗಳಿಂದ ಪ್ರಾರ್ಥನೆ ನಡೆಯಿತು. ಕ್ರೈಸ್ತ ಸಮುದಾಯದವರು ಹಾಗು ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಕಾರ್ಖಾನೆಯ ಡಬ್ಬಲ್ ರಸ್ತೆ ಮೂಲಕ ಅಂಡರ್ ಬ್ರಿಡ್ಜ್, ಹಾಲಪ್ಪ ವೃತ್ತವರೆಗೂ ಸಾಗಿ ಪುನಃ ಹಿಂದಿರುಗಿ ಗುತ್ತಿಗೆ ಕಾರ್ಮಿಕರ ಹೋರಾಟ ಸ್ಥಳಕ್ಕೆ ತಲುಪಿತು. ಕೊನೆಯಲ್ಲಿ ಕ್ಯಾಂಡಲ್ ಬೆಳಗುವ ಮೂಲಕ ಪ್ರಾರ್ಥಿಸಲಾಯಿತು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು, ಎಲ್ಲಾ ಕ್ರೈಸ್ತ ಸಭೆಗಳು ಮತ್ತು ಸಂಘ-ಸಂಸ್ಥೆಗಳ ಪ್ರಮುಖರು, ಧರ್ಮಗುರುಗಳು, ಮಹಿಳೆಯರು, ಮಕ್ಕಳು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಭದ್ರಾವತಿ.ಕಾಂ (bhadravathi.com) ಅಂತರ್ಜಾಲದ ಮೂಲಕ ಹೋರಾಟ : ೨೩೧ ಮಂದಿ ಬೆಂಬಲ
ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಹಲವು ರೀತಿಯ ಹೋರಾಟಗಳು ಆರಂಭಗೊಂಡಿದ್ದು, ಇದೀಗ ಅಂತರ್ಜಾಲ ಸಮರ್ಪಕವಾಗಿ ಬಳಸಿಕೊಂಡು ಹೋರಾಟ ಮಾಡಲು ಯುವ ಸಮುದಾಯ ಮುಂದಾಗಿದೆ.
ಭದ್ರಾವತಿ ಉಳಿಸಿ ವಿಐಎಸ್‌ಎಲ್-ಎಂಪಿಎಂ ಚಳುವಳಿ ಎಂಬ ಶೀರ್ಷಿಕೆಯಡಿ ಹೋರಾಟ ಆರಂಭಗೊಂಡಿದ್ದು, ಅಂತರ್ಜಾಲದಲ್ಲಿ ಆಂಗ್ಲ ಮತ್ತು ಕನ್ನಡ ಎರಡು ಭಾಷೆಯಲ್ಲಿ ಚಳುವಳಿ ಆರಂಭಿಸಲಾಗಿದೆ. ಈ ಹೋರಾಟಕ್ಕೆ ಈಗಾಗಲೇ ೨೩೧ ಮಂದಿ ಬೆಂಬಲಿಸಿದ್ದು, ಒಬ್ಬರು ವಿರೋಧಿಸಿದ್ದಾರೆ. ೧೪೭ ನಾಗರೀಕರು, ೫೬ ಗುತ್ತಿಗೆ ಕಾರ್ಮಿಕರು, ೧೨ ಕಾಯಂ ಹಾಗು ನಿವೃತ್ತ ಕಾರ್ಮಿಕರು, ಒಬ್ಬರು ಎಂಪಿಎಂ ಕಾರ್ಮಿಕರು, ಒಬ್ಬರು ರೈತರು, ೪ ವ್ಯಾಪಾರಿಗಳು, ಒಬ್ಬರು ಸರ್ಕಾರಿ ಉದ್ಯೋಗಿ, ಇಬ್ಬರು ಖಾಸಗಿ ಕಂಪನಿ ಉದ್ಯೋಗಿಗಳು, ೩ ವಿದ್ಯಾರ್ಥಿಗಳು ಹಾಗು ಇತರೆ ೪ ಮಂದಿ ಹೋರಾಟ ಬೆಂಬಲಿಸಿದ್ದಾರೆ.
ಚಳುವಳಿಯಲ್ಲಿ ಪಾಲ್ಗೊಳ್ಳುವವರು ನೇರವಾಗಿ (bhadravathi.com) ವಿಳಾಸಕ್ಕೆ ತೆರಳಿ ಬೆಂಬಲ ಮತ್ತು ವಿರೋಧಿಸುತ್ತಾರೆ. ಈ ಎರಡು ಆಯ್ಕೆಗಳಲ್ಲಿ ಯಾವುದಾದರೂ ಒಂದು ಆಯ್ಕೆ ಮಾಡುವ ಮೂಲಕ ಯಶಸ್ವಿಗೊಳಿಸುವಂತೆ ಕೋರಲಾಗಿದೆ
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಹಲವು ರೀತಿಯ ಹೋರಾಟಗಳು ಆರಂಭಗೊಂಡಿದ್ದು, ಇದೀಗ ಅಂತರ್ಜಾಲ ಸಮರ್ಪಕವಾಗಿ ಬಳಸಿಕೊಂಡು ಹೋರಾಟ ಮಾಡಲು ಯುವ ಸಮುದಾಯ ಮುಂದಾಗಿದೆ.
-
No comments:
Post a Comment