ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ
ಭದ್ರಾವತಿಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಜಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಮೂಲೆಕಟ್ಟೆ ಇನ್ಫ್ಯಂಟ್ ಜೀಸಸ್ ಚರ್ಚ್ ಹತ್ತಿರ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಶಂಕುಸ್ಥಾಪನೆ ನೆರವೇರಿಸಿದರು.
ಭದ್ರಾವತಿ, ಫೆ. ೭ : ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯಕ್ಕೆ ಹೆಚ್ಚಿನ ಮಾನ್ಯತೆ ನೀಡುವ ಮೂಲಕ ಆ ಸಮುದಾಯದ ಜನಕ್ಕೂ ಒಂದು ನೆಲೆ ನೀಡಿ ಉದಾರತೆ ಮೆರೆದಿರುವ ಕ್ಷೇತ್ರದ ಶಾಸಕರಿಗೆ ಕ್ರೈಸ್ತ ಸಮುದಾಯ ಎಂದಿಗೂ ಚಿರಋಣಿಯಾಗಿರುತ್ತದೆ ಎಂದು ಫಾಸ್ಟರ್ ರೆವರೆಂಡ್ ಡಾ. ಎಸ್. ದೇವನೇಸನ್ ಸಾಮ್ಯುಯಲ್ ಹೇಳಿದರು.
ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಜಾರಿmಬಲ್ ಟ್ರಸ್ಟ್ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ನಗರದ ಮೂಲೆಕಟ್ಟೆ ಇನ್ಫ್ಯಂಟ್ ಜೀಸಸ್ ಚರ್ಚ್ ಹತ್ತಿರ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ರೈಸ್ತ ಸಮುದಾಯಕ್ಕೆ ದಾನವಾಗಿ ನೀಡಿರುವ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಸಕರು ಕ್ರೈಸ್ತ ಸಮುದಾಯದ ಮೇಲೆ ಹೊಂದಿರುವ ಅಭಿಮಾನ ಹೆಚ್ಚಿನದ್ದಾಗಿದ್ದು, ಅವರು ನೀಡಿರುವ ಜಾಗಕ್ಕೆ ಸಂಬಂಧಿದಂತೆ ಯಾವುದೇ ಗೊಂದಲಗಳು ಇಲ್ಲ. ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ನೀಡುವ ಜೊತೆಗೆ ಶಾಸಕರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಧಿಕಾರ, ಸ್ಥಾನಮಾನಗಳು ಲಭಿಸುವಂತಾಗಲಿ ಎಂದರು.
ಪಾದರ್ ಆರೋಗ್ಯ ರಾಜ್ ಮಾತನಾಡಿ, ಸರಳತೆ ವ್ಯಕ್ತಿತ್ವ ಹೊಂದಿರುವ ಶಾಸಕರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಮುದಾಯ ಭವನ ಶೀಘ್ರದಲ್ಲಿಯೇ ನಿರ್ಮಾಣಗೊಂಡು ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಕ್ಕೂ ಅನುಕೂಲವಾಗಬೇಕು. ಶಾಸಕರಿಂದಲೇ ಈ ಸಮುದಾಯ ಭವನ ಉದ್ಘಾಟನೆಗೊಳ್ಳುವಂತಾಗಲಿ ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ರೈಸ್ತ ಸಮುದಾಯವರು ನನ್ನ ಮೇಲೆ ಹೊಂದಿರುವ ವಿಶ್ವಾಸಕ್ಕೆ ಚಿರಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಟ್ರಸ್ಟ್ ಅಧ್ಯಕ್ಷ ಸೆಲ್ವರಾಜ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ರೆವರೆಂಡ್ ಫಾಸ್ಟರ್ ಗಿಡಿಯೋನ್, ವೆಸ್ಲಿ ಕೆನಡಿ, ರೆವರೆಂಡ್ ಬಾಬಿರಾಜ್, ಫಾಸ್ಟರ್ ನೈಕಲ್ ಜೋಸೆಫ್, ಜೋಸ್ ಜಾರ್ಜ್, ಕೃಪದಾನಿ, ಸರೋಜಮ್ಮ, ಅಂತೋಣಿ ವಿಲ್ಸನ್, ಎಸ್. ಬಾಬು, ರಾಜನ್, ಜೆ.ಡಿ ಅನೋಕ್, ಜೇಮ್ಸ್, ಸಂಪತ್‌ಕುಮಾರ್, ದೇವಿಡ್, ಸುರೇಶ್‌ನಾಯ್ಕ್, ನಗರಸಭೆ ಸದಸ್ಯ ಜಾರ್ಜ್, ಮಾಜಿ ಸದಸ್ಯ ಪ್ರಾನ್ಸಿಸ್, ಪಿ.ವಿ ಪೌಲ್, ದೇವಿಡ್, ಫಾಸ್ಟರ್ ಪಾಂಡು, ಪ್ರಕಾಶ್, ವಿಲ್ಸನ್‌ಬಾಬು, ಆರ್. ಮೋಸಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment