ಭದ್ರಾವತಿ, ಫೆ. 8: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದ್ದು, ನಗರದ ವಿಐಎಸ್ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ ಸುಮಾರು 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಬಿ.ಎಸ್ ಯಡಿಯೂರಪ್ಪನವರು ಶಿವಮೊಗ್ಗ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ. ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಜಿಲ್ಲೆಯಲ್ಲಿ ಮತ ಕೇಳುವ ನೈತಿಕತೆ ಇಲ್ಲ ಎಂದರು.
ಶಾಸಕರಾದ ಬಿ.ಕೆ ಸಂಗಮೇಶ್ವರ, ಎನ್.ಎ ಹ್ಯಾರಿಸ್, ಸಲೀಂ ಅಹಮದ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಗೋಪಾಲ ಕೃಷ್ಣ ಬೇಲೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment