ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಶುಕ್ರವಾರ 'ಭದ್ರಾವತಿ ಬಂದ್' ಹೋರಾಟಕ್ಕೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಗುರುವಾರ ಕ್ಷೇತ್ರದಾದ್ಯಂತ ಬೈಕ್ ರ‍್ಯಾಲಿ ನಡೆಸಿ ಬಂದ್‌ಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಭದ್ರಾವತಿ, ಫೆ. ೨೩: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಶುಕ್ರವಾರ 'ಭದ್ರಾವತಿ ಬಂದ್' ಹೋರಾಟಕ್ಕೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಗುರುವಾರ ಕ್ಷೇತ್ರದಾದ್ಯಂತ ಬೈಕ್ ರ‍್ಯಾಲಿ ನಡೆಸಿ ಬಂದ್‌ಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಗುತ್ತಿಗೆ ಕಾರ್ಮಿಕರ ಹೋರಾಟ ಗುರುವಾರ ೩೫ ದಿನಗಳನ್ನು ಪೂರೈಸಿದ್ದು, ಹೋರಾಟಕ್ಕೆ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು, ಮಠಾಧೀಶರು, ಗಣ್ಯರು ಬೆಂಬಲ ಸೂಚಿಸಿದ್ದಾರೆ. ಇದುವರೆಗೂ ಕೇಂದ್ರ ಸರ್ಕಾರ ಹೋರಾಟಕ್ಕೆ ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ. ಇದೀಗ ಹೋರಾಟ ಮತ್ತಷ್ಟು ತೀವ್ರಗೊಳಿಸುವ ಅನಿವಾರ್ಯತೆಯಿಂದ 'ಭದ್ರಾವತಿ ಬಂದ್'ಗೆ ಕರೆ ನೀಡಲಾಗಿದೆ.
ಈ ನಡುವೆ ಫೆ.೨೭ರಂದು ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಈ ಎರಡು ಹೋರಾಟಗಳಿಗೂ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ವಾಪಾರಸ್ಥರು ಸೇರಿದಂತೆ ನಾಗರೀಕರು ಸಂಪೂರ್ಣ ಸಹಕಾರ ನೀಡುವಂತೆ ಗುತ್ತಿಗೆ ಕಾರ್ಮಿಕರು ಕೋರಿದ್ದಾರೆ.
No comments:
Post a Comment