ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕನಕ ವಿದ್ಯಾ ಸಂಸ್ಥೆ ೩ನೇ ತರಗತಿ ವಿದ್ಯಾರ್ಥಿನಿ ವಿಮರ್ಶ ಸಿ.ಎಂ ಕವಾಡ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯ ಸ್ಥಾನಪಡೆದು ಕೊಂಡಿದ್ದಾಳೆ.
ಭದ್ರಾವತಿ, ಫೆ. ೧೦ : ಕರಾಟೆ ಇಂಡಿಯಾ ಆರ್ಗನೈಸೇಷನ್ ಹಾಗೂ ಏಷಿಯನ್ ಕರಾಟೆ ಫೆಡರೇಷನ್/ ವರ್ಡ್ ಕರಾಟೆ ಫೆಡರೇಷನ್ ವತಿಯಿಂದ ಆಯೋಜಿಸಲಾಗಿದ್ದ ಮೈಸೂರು ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕನಕ ವಿದ್ಯಾ ಸಂಸ್ಥೆ ೩ನೇ ತರಗತಿ ವಿದ್ಯಾರ್ಥಿನಿ ವಿಮರ್ಶ ಸಿ.ಎಂ ಕವಾಡ್ ಭಾಗವಹಿಸಿ ತೃತೀಯ ಸ್ಥಾನಪಡೆದು ಕೊಂಡಿದ್ದಾಳೆ.
ಮೈಸೂರಿನ ಸೇಂಟ್ ಫಿಲೋಮಿನಾಸ್ ಕಾಲೇಜ್ ಇಂಡೋರ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೩ನೇ ಸ್ಥಾನ ಪಡೆದುಕೊಂಡು ರಾಜ್ಯಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ. ಈ ವಿದ್ಯಾರ್ಥಿನಿ ಇದೆ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಸಿ.ಡಿ ಮಂಜುನಾಥ್‌ರವರ ಪುತ್ರಿಯಾಗಿದ್ದು, ಈ ವಿದ್ಯಾರ್ಥಿಯನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
No comments:
Post a Comment