ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ವರ್ಗದವರು ಭಾಗಿ
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಪುತ್ರಿ ಹಿತಾರವರ ಶ್ರೀಮಂತ ಕಾರ್ಯಕ್ರಮ ಶುಕ್ರವಾರ ಶಿವಮೊಗ್ಗ ಲಗಾನ್ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಭದ್ರಾವತಿ, ಫೆ. ೧೭ : ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಪುತ್ರಿ ಹಿತಾರವರ ಶ್ರೀಮಂತ ಕಾರ್ಯಕ್ರಮ ಶುಕ್ರವಾರ ಶಿವಮೊಗ್ಗ ಲಗಾನ್ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಹಿತಾರವರು ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ರವರ ಸೊಸೆಯಾಗಿದ್ದು, ಶ್ರೀಮಂತ ಕಾರ್ಯಕ್ರಮದಲ್ಲಿ ಸಹೋದರ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.
ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು, ಹಿತೈಷಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.
No comments:
Post a Comment