ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಣೆ
೨೦೧೮ನೇ ಸಾಲಿನಲ್ಲಿ ಹಳೇನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕತವ್ಯ ನಿರ್ವಹಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಠಾಣೆಯ ಸಿಬ್ಬಂದಿ(ಸಿಎಚ್‌ಸಿ) ಚಂದ್ರಕಲಾ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.
ಭದ್ರಾವತಿ, ಫೆ. ೧೫ : ೨೦೧೮ನೇ ಸಾಲಿನಲ್ಲಿ ಹಳೇನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕತವ್ಯ ನಿರ್ವಹಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಠಾಣೆಯ ಸಿಬ್ಬಂದಿ(ಸಿಎಚ್‌ಸಿ) ಚಂದ್ರಕಲಾ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಚಂದ್ರಕಲಾ ಅವರನ್ನು ಅಭಿನಂದಿಸಿದರು. ಶಿವಮೊಗ್ಗ ಪೊಲೀಸ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಂ. ಸುರೇಶ್, ಡಿಸಿಆರ್ ಉಪ ನಿರೀಕ್ಷಕ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚಂದ್ರಕಲಾ ಅವರು ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಾನಪದ ಕಲಾವಿದ ದಿವಾಕರ್ ಅವರ ಪತ್ನಿಯಾಗಿದ್ದಾರೆ. ಇವರಿಗೆ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
No comments:
Post a Comment