ವರುಣ್‌ಗೌಡ
ಭದ್ರಾವತಿ, ಫೆ. ೨೪ : ಯುವ ಕಾಂಗ್ರೆಸ್ ರಾಜ್ಯ ವಕ್ತಾರ, ಕಾಗದನಗರ ನಿವಾಸಿ ವರುಣ್‌ಗೌಡರಿಗೆ ವ್ಯಕ್ತಿಯೋರ್ವ ಮೊಬೈಲ್‌ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಈ ಸಂಬಂಧ ವರುಣ್‌ಗೌಡ ಪೇಪರ್‌ಟೌನ್ ಪೊಲೀಸ್ ಠಾಣೆಗೆ ಶುಕ್ರವಾರ ಸಂಜೆ ದೂರು ನೀಡಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ ಶ್ರೀನಿವಾಸ್ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್‌ರವರು ನನ್ನನ್ನು ರಾಜ್ಯ ವಕ್ತಾರಾಗಿ ನನ್ನನ್ನು ಆಯ್ಕೆ ಮಾಡಿರುತ್ತಾರೆ. ಕಳೆದ ಸುಮಾರು ಒಂದು ತಿಂಗಳಿನಿಂದ ಅಧಿಕಾರ ಪಡೆದು ಪಕ್ಷ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಫೆ.೨೩ರ ಗುರುವಾರ ರಾತ್ರಿ ಸುಮಾರು ೧೦.೩೦ರ ಸಮಯದಲ್ಲಿ ಗಗನ್ ಎಂಬ ವ್ಯಕ್ತಿ ಜೆಡಿಎಸ್ ಪಕ್ಷ ಎಂದು ಹೇಳಿಕೊಂಡು ಕರೆ ಮಾಡಿದ್ದು, ಜೀವ ಬೆದರಿಕೆ ಹಾಕಿರುತ್ತಾರೆಂದು ದೂರಿದ್ದಾರೆ.
ಈ ಹಿನ್ನಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ನಾನು ಹೊರಗಡೆ ತಿರುಗಾಡುವಾಗ ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಹಿಂಬಾಲಿಸಿ ನಿಂದಿಸುತ್ತಾರೆ. ನನಗೆ ರಕ್ಷಣೆ ಅವಶ್ಯಕತೆ ಇದ್ದು, ಈ ಹಿನ್ನಲೆಯಲ್ಲಿ ರಕ್ಷಣೆ ನೀಡುವಂತೆ ಕೋರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕೈಗೊಂಡಿದ್ದಾರೆ.
No comments:
Post a Comment