ಫೆ.೧೫ರಂದು ಕ್ರೈಸ್ತರ ಬೆಂಬಲ : ಭದ್ರಾವತಿ.ಕಾಂ (bhadravathi.com) ಅಂತರ್ಜಾಲದ ಮೂಲಕ ಹೋರಾಟ
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಬಿ.ಎಸ್ ದಯಾನಂದ್‌ರವರು ಭದ್ರಾವತಿಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮಂಗಳವಾರ ಬೆಂಗಳೂರಿನಲ್ಲಿ ಗುತ್ತಿಗೆ ಕಾರ್ಮಿಕರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಬೆಂಬಲ ಸೂಚಿಸುವ ಜೊತೆಗೆ ಮುಂದಿನ ಹೋರಾಟಕ್ಕೆ ಕರೆ ನೀಡಿದರು.
ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಬಿ.ಎಸ್ ದಯಾನಂದ್‌ರವರು ಭದ್ರಾವತಿಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮಂಗಳವಾರ ಬೆಂಗಳೂರಿನಲ್ಲಿ ಗುತ್ತಿಗೆ ಕಾರ್ಮಿಕರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಬೆಂಬಲ ಸೂಚಿಸುವ ಜೊತೆಗೆ ಮುಂದಿನ ಹೋರಾಟಕ್ಕೆ ಕರೆ ನೀಡಿದರು. ಬಿ.ವಿ ಶ್ರೀನಿವಾಸ್‌ರವರು ಮುಂದಿನ ಹೋರಾಟ ದೆಹಲಿ ಮಟ್ಟದಲ್ಲಿ ನಡೆಯಬೇಕು. ಇದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದರು.
ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್ ಚಂದ್ರಹಾಸ ಕೇಂದ್ರ ಸರ್ಕಾರ ಹಾಗು ಉಕ್ಕು ಪ್ರಾಧಿಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಬಿ.ವಿ ಶ್ರೀನಿವಾಸ್‌ರವರಿಗೆ ವಿವರಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಕ್ಕೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಫೆ.೧೫ರಂದು ಕ್ರೈಸ್ತರ ಬೆಂಬಲ:
ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ನಗರದ ಎಲ್ಲಾ ಕ್ರೈಸ್ತ ಸಭೆಗಳು ಮತ್ತು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿಫೆ.೧೫ರಂದು ಸಂಜೆ ೬ ಗಂಟೆ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಲಿವೆ.
ಈ ಪ್ರತಿಭಟನೆಯಲ್ಲಿ ನಗರದ ಎಲ್ಲಾ ಕ್ರೈಸ್ತ ಸಮುದಾಯದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸೆಲ್ವರಾಜ್ ಕೋರಿದ್ದಾರೆ.
ಭದ್ರಾವತಿ.ಕಾಂ (bhadravathi.com) ಅಂತರ್ಜಾಲದ ಮೂಲಕ ಹೋರಾಟ :
ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಹಲವು ರೀತಿಯ ಹೋರಾಟಗಳು ಆರಂಭಗೊಂಡಿದ್ದು, ಇದೀತ ಅಂತರ್ಜಾಲ ಸಮರ್ಪಕವಾಗಿ ಬಳಸಿಕೊಂಡು ಹೋರಾಟ ಮಾಡಲು ಯುವ ಸಮುದಾಯ ಮುಂದಾಗಿದೆ.
ಭದ್ರಾವತಿ ಉಳಿಸಿ ವಿಐಎಸ್‌ಎಲ್-ಎಂಪಿಎಂ ಚಳುವಳಿ ಎಂಬ ಶೀರ್ಷಿಕೆಯಡಿ ಹೋರಾಟ ಆರಂಭಗೊಂಡಿದ್ದು, ಅಂತರ್ಜಾಲದಲ್ಲಿ ಆಂಗ್ಲ ಮತ್ತು ಕನ್ನಡ ಎರಡು ಭಾಷೆಯಲ್ಲಿ ಚಳುವಳಿ ಆರಂಭಿಸಲಾಗಿದೆ. ಈ ಹೋರಾಟಕ್ಕೆ ಈಗಾಗಲೇ ೧೪೫ ಮಂದಿ ಬೆಂಬಲಿಸಿದ್ದಾರೆ.
ಚಳುವಳಿಯಲ್ಲಿ ಪಾಲ್ಗೊಳ್ಳುವವರು ನೇರವಾಗಿ bhadravathi.com ವಿಳಾಸಕ್ಕೆ ತೆರಳಿ ಬೆಂಬಲ ಮತ್ತು ವಿರೋಧಿಸುತ್ತಾರೆ. ಈ ಎರಡು ಆಯ್ಕೆಗಳಲ್ಲಿ ಯಾವುದಾದರೂ ಒಂದು ಆಯ್ಕೆ ಮಾಡುವ ಮೂಲಕ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಭದ್ರಾವತಿ ಉಳಿಸಿ ವಿಐಎಸ್‌ಎಲ್-ಎಂಪಿಎಂ ಚಳುವಳಿ ಎಂಬ ಶೀರ್ಷಿಕೆಯಡಿ ಹೋರಾಟ ಆರಂಭಗೊಂಡಿದ್ದು, ಅಂತರ್ಜಾಲದಲ್ಲಿ ಆಂಗ್ಲ ಮತ್ತು ಕನ್ನಡ ಎರಡು ಭಾಷೆಯಲ್ಲಿ ಚಳುವಳಿ ಆರಂಭಿಸಲಾಗಿದೆ. ಈ ಹೋರಾಟಕ್ಕೆ ಈಗಾಗಲೇ ೧೪೫ ಮಂದಿ ಬೆಂಬಲಿಸಿದ್ದಾರೆ.
No comments:
Post a Comment