ಭದ್ರಾವತಿ ವಿಐಎಸ್‌ಎಲ್ ಮುಚ್ಚುವ ಆದೇಶದ ವಿರುದ್ಧ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ಸೂಚಿಸಿ ಸೋಮವಾರ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಯುವ ಘಟಕದ ತಾಲೂಕು ಅಧ್ಯಕ್ಷ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ಎಂ.ಎ ಅಜಿತ್ ನಡುರಸ್ತೆಯಲ್ಲಿ ಕುಳಿತು ಉಪಹಾರ ಸೇವಿಸಿ ಗಮನ ಸೆಳೆದರು.
ಭದ್ರಾವತಿ, ಫೆ. ೨೭: ವಿಐಎಸ್‌ಎಲ್ ಮುಚ್ಚುವ ಆದೇಶದ ವಿರುದ್ಧ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ಸೂಚಿಸಿ ಸೋಮವಾರ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಯುವ ಘಟಕದ ತಾಲೂಕು ಅಧ್ಯಕ್ಷ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ಎಂ.ಎ ಅಜಿತ್ ನಡುರಸ್ತೆಯಲ್ಲಿ ಕುಳಿತು ಉಪಹಾರ ಸೇವಿಸಿ ಗಮನ ಸೆಳೆದರು.
ಶಿವಮೊಗ್ಗ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ಮೋದಿಯವರಿಗೆ ಮನವಿ ಸಲ್ಲಿಸುವ ಉದ್ದೇಶದಿಂದ ಗುತ್ತಿಗೆ ಕಾರ್ಮಿಕರು ಕೈಗೊಂಡಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಎಂ.ಎ ಅಜಿತ್ ಹಾಗು ಜೆಡಿಎಸ್ ಪಕ್ಷದ ಮುಖಂಡರು ಬಿಳಿಕಿ ಕ್ರಾಸ್‌ವರೆಗೂ ಸಾಗಿದರು. ಈ ಸಂದರ್ಭದಲ್ಲಿ ಪೊಲೀಸರು ಪಾದಯಾತ್ರೆ ತಡೆಯುವಲ್ಲಿ ಯಶಸ್ವಿಯಾದರು. ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ವಶಕ್ಕೆ ಪಡೆದರು.
ಈ ಅವಧಿಯಲ್ಲಿ ಎಂ.ಎ ಅಜಿತ್ ನಡುರಸ್ತೆಯಲ್ಲಿಯೇ ಕುಳಿತು ಉಪಹಾರ ಸೇವಿಸಿದರು. ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment