ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು, ಶನಿವಾರ ಅಪ್ಪರ್ ಹುತ್ತಾಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಫೆ. ೧೮ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ತೀವ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರಗೌಡ ಹೇಳಿದರು.
ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು, ಶನಿವಾರ ಅಪ್ಪರ್ ಹುತ್ತಾಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಹೋರಾಟ ತೀವ್ರಗೊಳಿಸಲು ಸೂಕ್ತ ಸಮಯ ಇದಾಗಿದ್ದು, ಸರ್ಕಾರಕ್ಕೆ ಹೋರಾಟದ ಬಿಸಿ ಮುಟ್ಟಿಸಬೇಕು. ಇಲ್ಲವಾದಲ್ಲಿ ಹೋರಾಟಕ್ಕೆ ಯಾವುದೇ ಫಲಿತಾಂಶ ಲಭಿಸುವುದಿಲ್ಲ. ಮುಂದಿನ ೩-೪ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟ ನಡೆಯಬೇಕು. ಆಗ ಮಾತ್ರ ಸರ್ಕಾರ ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಲಿದೆ ಎಂದರು.
ಸ್ಥಳೀಯ ಮುಖಂಡರು ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ನಾವೆಲ್ಲರೂ ಬೆಂಬಲ ವ್ಯಕ್ತಪಡಿಸಬೇಕೆಂದರು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, ಇಂದು ನಮ್ಮ ಮುಂದೆ ದೊಡ್ಡ ಸವಾಲು ಎದುರಾಗಿದೆ. ಕಾರ್ಖಾನೆ ಉಳಿಸಿಕೊಳ್ಳಲು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ನಮಗೆ ಕಾರ್ಖಾನೆ ಉಳಿಸಿಕೊಳ್ಳುವ ನಂಬಿಕೆ ಇದೆ. ನಮ್ಮ ಹೋರಾಟಕ್ಕೆ ನಿವಾಸಿಗಳು ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಕಾರ್ಮಿಕ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ೩೧ ದಿನಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಿಗೆ ತೆರಳಿ ಹೋರಾಟಕ್ಕೆ ಬೆಂಬಲ ನೀಡುವಂತೆ ನಿವಾಸಿಗಳಿಗೆ ಮನವಿ ಮಾಡುತ್ತಿದ್ದಾರೆ.
No comments:
Post a Comment