ಭದ್ರಾವತಿ, ಫೆ. 27: ಪೊಲೀಸರು ಗುತ್ತಿಗೆ ಕಾರ್ಮಿಕರ ಹೋರಾಟವನ್ನು ಆರಂಭಿಕ ಹಂತದಲ್ಲಿ ತಡೆಯಲು ಸಾಕಷ್ಟು ಪ್ರಯತ್ನಿಸಿದರು. ಆದರೆ ಪೊಲೀಸರನ್ನು ಮುನ್ನುಗ್ಗಿದ ಗುತ್ತಿಗೆ ಕಾರ್ಮಿಕರು ಶಾಸಕ ಬಿ.ಕೆ ಸಂಗಮೇಶ್ವರ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಿದರು.
ಇದಕ್ಕೂ ಮೊದಲು ಮಾತನಾಡಿದ ಶಾಸಕರು ಹಾಗೂ ಕಾರ್ಮಿಕ ಮುಖಂಡರು, ಹೋರಾಟವನ್ನು ತಡೆಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಘಟನೆಯಾಗಿದೆ. ಕಾರ್ಮಿಕ ನಾಯಕರನ್ನು ಬಂಧಿಸಿರುವುದು ವಿಪರ್ಯಾಸದ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಂತಿಯುತವಾಗಿ ಹೋರಾಟ ನಡೆಸಲು ಮುಂದಾಗಿರುವ ಕಾರ್ಮಿಕರನ್ನು ಪೊಲೀಸರ ಮೂಲಕ ತಡೆಯಲು ಯತ್ನಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಹಾಕಿದರು. ಕಾರ್ಖಾನೆ ಮುಂಭಾಗದಿಂದ ಡಬ್ಬಲ್ ರಸ್ತೆಯಲ್ಲಿ ಸಾಗಿದ ಗುತ್ತಿಗೆ ಕಾರ್ಮಿಕರನ್ನು ಅಲ್ಲಿಯೇ ತಡೆಯಲು ಪೊಲೀಸರು ಸಾಕಷ್ಟು ಪ್ರಯತ್ನಿಸಿದ್ದು. ಆದರೆ ಸಾಧ್ಯವಾಗಲಿಲ್ಲ.
ನಂತರ ಮುನ್ನುಗ್ಗಿದ ಗುತ್ತಿಗೆ ಕಾರ್ಮಿಕರೊಂದಿಗೆ ಶಾಸಕ ಬಿ ಕೆ ಸಂಗಮೇಶ್ವರ್ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಾದಯಾತ್ರೆ ಆರಂಭಿಸಿದರು.
No comments:
Post a Comment