ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದಿಂದ ಭಾನುವಾರ ಭದ್ರಾವತಿ ನಗರದ ಸಿ.ಎನ್ ರಸ್ತೆ, ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಐಕ್ಯತಾ ಜಾಗೃತಿ ಸಮಾವೇಶ ಯುವ ಮುಖಂಡ, ವಿಧಾನ ಸಭಾ ಕ್ಷೇತ್ರದ ಎಎಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಮೆಡಿಕಲ್ ಆನಂದ್ ಉದ್ಘಾಟಿಸಿದರು.
ಭದ್ರಾವತಿ, ಫೆ. ೧೨: ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟನೆಯಾಗಬೇಕೆಂದು ಯುವ ಮುಖಂಡ, ವಿಧಾನ ಸಭಾ ಕ್ಷೇತ್ರದ ಎಎಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಮೆಡಿಕಲ್ ಆನಂದ್ ಕರೆ ನೀಡಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದಿಂದ ಭಾನುವಾರ ನಗರದ ಸಿ.ಎನ್ ರಸ್ತೆ, ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಐಕ್ಯತಾ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರ ಮೇಲೆ ಶೋಷಣೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಕಾರ್ಮಿಕರು ಮೊದಲು ಜಾಗೃತರಾಗಿ ಸಂಘಟಿತರಾಗಬೇಕಾಗಿದೆ. ಕಾರ್ಮಿಕರೆಲ್ಲರೂ ಸಂಘಟಿತರಾಗಲು ಈ ರೀತಿಯ ಸಮಾವೇಶಗಳು ಹೆಚ್ಚು ಸಹಕಾರಿಯಾಗಿವೆ. ಅಲ್ಲದೆ ಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸುವುದು ವಿಶೇಷವಾಗಿದೆ ಎಂದರು.
ಕ್ಷೇತ್ರದಲ್ಲಿ ಶಾಸಕರು ಸೇರಿದಂತೆ ಸಾಕಷ್ಟು ಮಂದಿ ಜನಪ್ರತಿನಿಧಿಗಳು ಶ್ರೀಮಂತರಿದ್ದಾರೆ. ಆದರೆ ಬಡವರ ನೆರವಿಗೆ ಮುಂದಾಗುವವರು ವಿರಳ. ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಕಡು ಬಡವರನ್ನು ಗುರುತಿಸಿ ನನ್ನ ಸ್ವಂತ ಹಣದಲ್ಲಿ ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಿದ್ದೇನೆ. ಅಲ್ಲದೆ ಹಲವಾರು ಸೇವಾ ಕಾರ್ಯಗಳನ್ನು ಕೈಗೊಂಡಿದ್ದೇನೆ. ವಿನೋದ್‌ರವರು ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಪರವಾಗಿ ತಮ್ಮನ್ನು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಸಮಾವೇಶದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸುವ ಜೊತೆಗೆ ಪ್ರಶಸ್ತಿಗಳನ್ನು ನೀಡಲಾಯಿತು. ಅಲ್ಲದೆ ಆಯ್ಕೆಯಾದ ಫಲಾನುಭವಿಗಳಿಗೆ ಫ್ಲಂಬರ್ ಟೂಲ್ ಕಿಟ್, ಎಲೆಕ್ಟ್ರಿಷಿಯನ್ ಟೂಲ್ ಕಿಟ್ ಹಾಗು ಮಹಿಳೆಯರಿಗೆ ಪೌಷ್ಠಿಕಾಂಶ ಕಿಟ್, ನೊಂದಾಯಿತ ಫಲಾನುಭವಿಯ ಗುರುತಿನ ಚೀಟಿ ಹಾಗು ಒಕ್ಕೂಟದ ಸದಸ್ಯತ್ವ ಗುರುತಿನ ಚೀಟಿ ವಿತರಿಸಲಾಯಿತು.
ನ್ಯಾಯವಾದಿ ವೈ. ವಿಠ್ಠಲ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸುವುದು ಇಂದು ಅಗತ್ಯವಾಗಿದ್ದು, ಈ ಹಿನ್ನಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗಪಡೆದುಕೊಳ್ಳಬೇಕೆಂದರು.
ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷರಾದ ರಾಜಚಾರಿ, ಸುಬ್ರಮಣಿ, ರಾಜ್ಯ ಖಜಾಂಚಿ ಚಲುವರಾಜ್, ಸಹಕಾರ್ಯದರ್ಶಿ ಎಸ್.ವೆಂಕಟೇಶ್, ನಿರ್ದೇಶಕರಾದ ಯಲ್ಲಪ್ಪ, ವಿ. ಅರವಿಂದ್, ಪವಿತ್ರ, ಕೆ. ರಾಜು, ಬಿ.ವೆಂಕಟೇಶ್, ಸುರೇಶ್, ಕುಮಾರ್, ಮಂಜುನಾಥ ರಾವ್, ಪಳನಿ, ಮಧು, ಮೋಹನ್ ಕುಮಾರ್, ಸಂಧ್ಯಾ, ತಾಲೂಕು ಸಮಿತಿ ಪ್ರಮುಖರಾದ ರಮೇಶ್, ಯು. ರಘು, ಜಯಣ್ಣ, ಜಗದೀಶ್, ಆಶೀರ್ವಾದ್, ಗೀತಾ, ಎ. ಆನಂದ್(ಆರ್ಟ್ಸ್) ರೇಖಾ, ಸುಬ್ರಮಣಿ, ಟಿ.ಜೆ ನೇತ್ರಾವತಿ, ಎಚ್. ಮಂಜುನಾಥ್, ಶ್ರೀಕಾಂತ್, ಸೋಮಶೇಖರ್, ಗ್ರಾಮಾಂತರ ಸಮಿತಿ ಪ್ರಮುಖರಾದ ವಸಂತರಾವ್, ಪುನೀತ್, ಪಿ. ವಿಜಯ್ ಕುಮಾರ್, ಶೇಖರಪ್ಪ, ಸಂದೇಶ್ ಪೈ, ಕೆ. ಸಂತೋಷ್, ಟಿ. ಕುಮಾರ್, ಎನ್.ಮುನಿಯಪ್ಪ, ಆಕಾಶ್, ಪಿ.ಪ್ರವೀಣ್, ಮುರುಗನ್, ಈಶಣ್ಣ, ಡಿ.ಪ್ರಶಾಂತ್, ಜಯಣ್ಣ, ಆರ್. ಮುನಿಯಪ್ಪ, ಆರ್. ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮನು ಆರ್ಕೇಸ್ಟ್ರಾ ಮಾಲೀಕ ಮನು ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಸಮಿತಿ ಕಾರ್ಯದರ್ಶಿ ವಿ. ಶಶಿಕುಮಾರ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಸುಶೀಲ ವಂದಿಸಿದರು.
No comments:
Post a Comment