ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿಸುವ ಸಂಬಂಧ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಕಾರ್ಮಿಕರ ನಿಯೋಗ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿಯವರನ್ನು ಭಾನುವಾರ ಭೇಟಿಮಾಡಿ ಮನವಿ ಸಲ್ಲಿಸಿದರು.
ಭದ್ರಾವತಿ, ಫೆ. ೧೨: ವಿಐಎಸ್‌ಎಲ್ ಕಾರ್ಖಾನೆ ಉಳಿಸುವ ಸಂಬಂಧ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಕಾರ್ಮಿಕರ ನಿಯೋಗ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿಯವರನ್ನು ಭಾನುವಾರ ಭೇಟಿಮಾಡಿ ಮನವಿ ಸಲ್ಲಿಸಿತು.
ಪೀಠಾಧ್ಯಕ್ಷರಿಗೆ ಮನವಿ ಸಲ್ಲಿಸಿದ ನಿಯೋಗದ ಪ್ರಮುಖರು, ಕಳೆದ ೨೫ ದಿನಗಳಿಂದ ಹಮ್ಮಿಕೊಳ್ಳಲಾಗಿರುವ ಅನಿರ್ಧಿಷ್ಟಾವಧಿ ಹೋರಾಟದ ಬೆಳವಣಿಗೆ ಹಾಗು ಕಾರ್ಖಾನೆ ಆಡಳಿತ ಮಂಡಳಿ ಕೈಗೊಳ್ಳುತ್ತಿರುವ ತೀರ್ಮಾನಗಳ ಕುರಿತು ವಿವರಿಸಿದರು.
ಶ್ರೀ ಕ್ಷೇತ್ರದ ಕಾರ್ಯದರ್ಶಿಯಾಗಿರುವ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಗೂ ಸಹ ಗುತ್ತಿಗೆ ಕಾರ್ಮಿಕರ ನಿಯೋಗದಿಂದ ಮನವಿ ಸಲ್ಲಿಸಲಾಯಿತು. ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ನಿವೃತ್ತ ಕಾರ್ಮಿಕ ಮುಖಂಡರು ಸೇರಿದಂತೆ ಇನ್ನಿತರರು ನಿಯೋಗದಲ್ಲಿ ಪಾಲ್ಗೊಂಡಿದ್ದರು.
No comments:
Post a Comment