ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ನೇಮಕ
ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀರವರನ್ನು ನೇಮಕಗೊಳಿಸಲಾಗಿದೆ.
ಭದ್ರಾವತಿ, ಮಾ. ೨ : ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀರವರನ್ನು ನೇಮಕಗೊಳಿಸಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಶಾಸಕರ ಆಪ್ತ ಕಾರ್ಯದರ್ಶಿ ಉಷಾ ಉಪಸ್ಥಿತರಿದ್ದರು.
ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್, ಪಕ್ಷದ ಜಿಲ್ಲಾ ಹಾಗು ತಾಲೂಕು ಮುಖಂಡರುಗಳಿಗೆ ವಿಜಯಲಕ್ಷ್ಮೀ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment