ಭದ್ರಾವತಿ, ಮಾ. ೧೭: ವಿಜಯ ಸಂಕಲ್ಪ ಯಾತ್ರೆ ಮಾ.೧೮ರ ಶನಿವಾರ ಬೆಳಿಗ್ಗೆ ೮.೩೦ಕ್ಕೆ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿದೆ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.
ಅವರು ಈ ಕುರಿತು ಮಾಹಿತಿ ನೀಡಿ, ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್‌ಕುಮಾರ್, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಹಿರಿಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ಆರಂಭಗೊಳ್ಳುವ ಯಾತ್ರೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ನಂತರ ಹೊಸಮನೆ ಶಿವಾಜಿ ಸರ್ಕಲ್‌ವರೆಗೂ ಸಾಗಲಿದೆ. ಸಂಕಲ್ಪ ಯಾತ್ರೆ ಕುರಿತು ಪಕ್ಷದ ಪ್ರಮುಖರು ಮಾತನಾಡಲಿದ್ದು, ಇಲ್ಲಿಯೇ ಮುಕ್ತಾಯಗೊಳ್ಳಲಿದೆ.
ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
No comments:
Post a Comment