ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಭದ್ರಾವತಿ ಎಚ್. ರವಿಕುಮಾರ್ ಹಾಗು ತಾಲೂಕು ಅಧ್ಯಕ್ಷ ಬಿ.ಕೆ ರಮೇಶ್‌ರವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಭದ್ರಾವತಿ, ಮಾ. ೧೭ : ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಹಾಗು ತಾಲೂಕು ಅಧ್ಯಕ್ಷ ಬಿ.ಕೆ ರಮೇಶ್‌ರವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನಗರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು. ಬಿ.ಕೆ ಮೋಹನ್ ಮಾತನಾಡಿ, ರವಿಕುಮಾರ್ ಹಾಗು ಅವರ ಬೆಂಬಲಿಗರು ಬಹಳಷ್ಟು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಮೂಲಕ ಗುರುತಿಸಿಕೊಂಡಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ರವಿಕುಮಾರ್ ಹಾಗು ಬೆಂಬಲಿಗರು ಮಾತನಾಡಿ, ಬಹಳಷ್ಟು ಭರವಸೆ, ವಿಶ್ವಾಸಗಳನ್ನು ಹೊಂದುವ ಮೂಲಕ ಎಎಪಿ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷವನ್ನು ಸಂಘಟಿಸುವಲ್ಲಿ ಶ್ರಮಿಸಿದ್ದೇವೆ. ಆದರೆ ಇತ್ತೀಚಿಗೆ ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯದೆಲ್ಲೆಡೆ ಹಣವಂತರಿಗೆ ಮಣೆ ಹಾಕುತ್ತಿದ್ದಾರೆ. ಇದರಿಂದಾಗಿ ಪ್ರಾಮಾಣಿಕ ಕಾರ್ಯಕರ್ತರು ಪಕ್ಷದಿಂದ ಹೊರಬರುವಂತಾಗಿದೆ. ರಾಜ್ಯದಲ್ಲಿ ಎಎಪಿ ಪಕ್ಷಕ್ಕೆ ಮತ ಹಾಕುವುದು ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸಿದಂತಾಗುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಎಎಪಿ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಾಗುತ್ತಿದೆ ಎಂದರು.
ಜೆಡಿಎಸ್ ಪಕ್ಷದ ಮಹಿಳಾ ಮುಖಂಡರಾದ ರೇಷ್ಮಬಾನುರವರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ರೇಷ್ಮಬಾನು ಸಹ ಈ ಹಿಂದೆ ಬಹಳ ವರ್ಷಗಳಿಂದ ಎಎಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪಕ್ಷದ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಮಾಜಿ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸದಸ್ಯರಾದ ಲತಾ ಚಂದ್ರಶೇಖರ್, ಶೃತಿ ವಸಂತ್, ಕಾಂತರಾಜ್, ಮುಖಂಡರಾದ ಅಮೀರ್‌ಜಾನ್, ಶ್ರೀನಿವಾಸ್, ತಬ್ರೇಸ್ ಖಾನ್, ವರುಣ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment