ಭದ್ರಾವತಿ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಭಾನುವಾರ ಡಿಎಸ್‌ಎಸ್ (ಅಂಬೇಡ್ಕರ್‌ವಾದ) ಕಾರ್ಯಕರ್ತರ ಸಭೆ ಹಾಗು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ಬೆಂಬಲ ಸೂಚಿಸಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ, ನಗರಸಭೆ ಸದಸ್ಯ ಬಸವರಾಜ್ ಬಿ ಆನೆಕೊಪ್ಪ ಮಾತನಾಡಿದರು.
ಭದ್ರಾವತಿ, ಮಾ. ೫ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪಡೆ ವತಿಯಿಂದ ಬೆಂಬಲ ಸೂಚಿಸಿ ನಗರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹೋರಾಟ ನಡೆಸಲು ತೀರ್ಮಾನಿಸಲಾಯಿತು.
ಭಾನುವಾರ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆ ಹಾಗು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ಬೆಂಬಲ ಸೂಚಿಸಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪ್ರಮುಖರು, ಪ್ರಸ್ತುತ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ಹೋರಾಟದ ಅಗತ್ಯವಿದೆ. ಈ ಹಿನ್ನಲೆಯಲ್ಲಿ ನಾವುಗಳು ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ. ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಬೇಕಾಗಿದೆ ಎಂದರು.
ನಂತರ ಬೆಂಬಲ ಸೂಚಿಸುವ ನಿರ್ಣಯ ಕೈಗೊಂಡು ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಂಘಟನಾ ಸಂಚಾಲಕ ಆರ್ ಹರೀಶ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ, ನಗರಸಭೆ ಸದಸ್ಯ ಬಸವರಾಜ್ ಬಿ ಆನೆಕೊಪ್ಪ, ಡಿಎಸ್‌ಎಸ್ ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು, ಡಾ. ಬಿ.ಆರ್ ಅಂಬೇಡರ್ ಎಸ್.ಸಿ/ಎಸ್‌ಟಿ ಪಡೆ ಅಧ್ಯಕ್ಷ ವೆಂಕಟೇಶ್ ಉಜ್ಜನಿಪುರ, ದಲಿತ ಮುಖಂಡ ಸಂಪತ್, ಜಮೀರ್ (ಕೆಂಪು ಸೇನೆ), ಹನುಮಂತಪ್ಪ, ಅಣ್ಣಪ್ಪ, ಸಂತೋಷ್, ಶಿವಕುಮಾರ್, ಶ್ರೀನಿವಾಸ್, ಮಂಜುನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಗೇಶ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
No comments:
Post a Comment