ಅರಬಿಂದೊ ಮಿತ್ರ
ಭದ್ರಾವತಿ, ಮಾ. ೨೯ : ಪಶ್ಚಿಮ ಬಂಗಾಳದ ಬರ್ನ್ಪುರ ಉಕ್ಕು ಕಾರ್ಖಾನೆಯ ನಿವೃತ್ತ ಕಾರ್ಮಿಕ ಹಾಗು ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಅರಬಿಂದೊ ಮಿತ್ರ(೬೬) ನಗರದ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ಸೂಚಿಸಲು ಹಾಗು ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ವಿಶೇಷ ಸಭೆಯಲ್ಲಿ ಭಾಗವಹಿಸಲು ಸೈಲ್ ನಿವೃತ್ತ ಕಾರ್ಮಿಕರ ಒಕ್ಕೂಟದ ಉನ್ನತದ ಮಟ್ಟದ ಸಮಿತಿಯೊಂದಿಗೆ ನಗರಕ್ಕೆ ಆಗಮಿಸಿದ್ದ ಅರಬಿಂದೊ ಮಿತ್ರ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು.
ಅತಿಥಿ ಗೃಹದ ಮಹಡಿಯಲ್ಲಿ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದು, ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಇವರನ್ನು ತಕ್ಷಣ ವಿಐಎಸ್‌ಎಲ್ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
No comments:
Post a Comment