ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಅಶ್ವಿನಿ ಶಶಿಕುಮಾರ್ ಶಂಕರಘಟ್ಟ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಮೇ. ೧೭: ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಅಶ್ವಿನಿ ಶಶಿಕುಮಾರ್ ಶಂಕರಘಟ್ಟ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಅಶ್ವಿನಿ ಶಶಿಕುಮಾರ್ ೧೬ ಮತಗಳು ಹಾಗು ಇವರ ಪ್ರತಿಸ್ಪರ್ಧಿ ಕವಿತಾ ಕವಿತಾ ಪುಟ್ಟೇಗೌಡ ೪ ಮತಗಳನ್ನು ಪಡೆದುಕೊಂಡರು. ೨೧ ಸದಸ್ಯ ಬಲ ಹೊಂದಿರುವ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಒಪ್ಪಂದದಂತೆ ಆಂತರಿಕವಾಗಿ ಅಧಿಕಾರ ಹಂಚಿಕೆ ಮಾಡಿಕೊಂಡಿದ್ದು, ಉಪಾಧ್ಯಕ್ಷರಾಗಿದ್ದ ಕವಿತಾ ರುದ್ರೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಚುನಾವಣೆ ನಡೆಯಿತು. ಓರ್ವ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿಲ್ಲ. ಪಶುಸಂಗೋಪನಾ ಇಲಾಖೆಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ಬಸವರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಹಿಂದುಳಿದ ವರ್ಗಗಳ ಗ್ರಾಮಾಂತರ ಅಧ್ಯಕ್ಷ ಎಂ. ರಮೇಶ್, ವಿಜಯ್ ಕುಮಾರ್, ಲೋಕೇಶ್, ಎಂ.ವಿ ಮುರುಗೇಶ್, ವೀರೇಶ್, ಶ್ರೀಕಾಂತ್ ಗ್ರಾಮದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ನೂತನ ಉಪಾಧ್ಯಕ್ಷ ಅಶ್ವಿನಿ ಶಶಿಕುಮಾರ್‌ರವರನ್ನು ಅಭಿನಂದಿಸಿದ್ದಾರೆ.
No comments:
Post a Comment