ಭದ್ರಾವತಿ, ಮಾ. ೨೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಕೈಬಿಡಬೇಕೆಂದು ಮತ್ತು ರಾಜ್ಯ ಸರ್ಕಾರಿ ಸ್ವಾಮ್ಯದ ಎಂಪಿಎಂ ಕಾರ್ಖಾನೆ ಪುನರ್ ಆರಂಭಿಸಬೇಕೆಂದು ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿ ಮಾ.೨೭ರಂದು ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ತಾಲೂಕು ಶಾಖೆ ವತಿಯಿಂದ ಮನವಿ ಸಲ್ಲಿಸುವ ಮೂಲಕ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಲಾಗುತ್ತಿದೆ.
ಕಾರ್ಖಾನೆ ಮುಂಭಾಗ ಮಧ್ಯಾಹ್ನ ೨.೩೦ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಚರ್ಚ್‌ಗಳ ಧರ್ಮಗುರುಗಳು, ಫಾಸ್ಟರ್‌ಗಳು, ಸಭಾಪಾಲಕರು, ಧರ್ಮಭಗಿನಿಯರು, ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ. ತಹಸೀಲ್ದಾರ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಗುವುದು.
ಕೈಸ್ತ ಸಮುದಾಯದವರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ನ್ಯೂಟೌನ್ ಅಮಲೋದ್ಭವಿಮಾತೆ ದೇವಾಲಯದ ಧರ್ಮಗುರು ಲ್ಯಾನ್ಸಿ ಡಿಸೋಜ ಮತ್ತು ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸಂಚಾಲಕ ಅಂತೋಣಿ ವಿಲ್ಸನ್ ಕೋರಿದ್ದಾರೆ.
No comments:
Post a Comment