ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಬುಧವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಭದ್ರಾವತಿ, ಮಾ. ೮ : ಕೆಎಸ್‌ಆರ್‌ಟಿಸಿ ಬಸ್ ಘಟಕ ಸೇರಿದಂತೆ ನಗರದ ವಿವಿಧೆಡೆ ಬುಧವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಘಟಕ ವ್ಯವಸ್ಥಾಪಕಿ ಅಂಬಿಕಾ ಸುಧೀರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಇಲಾಖೆ ನಿರೀಕ್ಷಕಿ ಮುಮ್ತಾಜ್ ಬೇಗಂ, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಆಕಾಶ ನೀಲಿ ಬಣ್ಣದ ಸೀರೆಯುಟ್ಟು ಸಂಭ್ರಮಿಸಿದ ಉದ್ಯೋಗಸ್ಥ ಮಹಿಳೆಯರು :
ನಗರದ ಅಂಡರ್‌ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಭಾರತೀಯ ಜೀವವಿಮಾ ನಿಗಮದ ಕಛೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಆಕಾಶ ನೀಲಿ ಬಣ್ಣದ ಸೀರೆಯುಟ್ಟು ಸಂಭ್ರಮಿಸಿದರು. ಮಹಿಳಾ ದಿನಾಚರಣೆ ಶುಭಾಶಯ ಹಂಚಿಕೊಂಡರು.
ಭದ್ರಾವತಿ ಭಾರತೀಯ ಜೀವವಿಮಾ ನಿಗಮದ ಕಛೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಆಕಾಶ ನೀಲಿ ಬಣ್ಣದ ಸೀರೆಯುಟ್ಟು ಸಂಭ್ರಮಿಸಿದರು.
No comments:
Post a Comment