ಪೆಂಡೆಂ ಪೊಗಲಯ್ಯ
ಭದ್ರಾವತಿ, ಮಾ. ೩೦ : ಜನ್ನಾಪುರ ಗಣೇಶ್ ಕಾಲೋನಿ ನಿವಾಸಿ, ಜೆಡಿಎಸ್ ಜಿಲ್ಲಾ ಕ್ರೈಸ್ತ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಡಾರ್ವಿನ್‌ರವರ ತಂದೆ ಪೆಂಡೆಂ ಪೊಗಲಯ್ಯ(೭೩) ಬುಧವಾರ ನಿಧನ ಹೊಂದಿದರು.
ಪತ್ನಿ ನಿವೃತ್ತ ಶಿಕ್ಷಕಿ ಶಾಂತಕುಮಾರಿ, ಪುತ್ರ ಡಾರ್ವಿನ್ ಹಾಗು ಇಬ್ಬರು ಪುತ್ರಿಯರು ಇದ್ದರು. ಪೆಂಡೆಂ ಪಗುಲಯ್ಯ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿದ್ದು, ಅಲ್ಲದೆ ನ್ಯೂಟೌನ್ ಸಿಎಸ್‌ಐ ವೇನ್ಸ್ ಸ್ಮಾರಕ ದೇವಾಲಯ ಸದಸ್ಯರಾಗಿದ್ದರು. ಇವರ ಅಂತ್ಯಕ್ರಿಯೆ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದ ಸಂಯುಕ್ತ ಕ್ರೈಸ್ತ ಸಮಾಧಿಯಲ್ಲಿ ಗುರುವಾರ ಸಂಜೆ ನೆರವೇರಿತು.
ಇವರ ನಿಧನಕ್ಕೆ ವಿವಿಧ ಚರ್ಚ್ ಧರ್ಮಗಳು, ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ಸೆಲ್ವರಾಜ್, ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಕ್ರೈಸ್ತ ಸಮಾಜದ ಮುಖಂಡರು, ನಿವೃತ್ತ ಕಾರ್ಮಿಕರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment