ಎರಡು ಕಾರ್ಖಾನೆಗಳಿಗೂ ಅಗತ್ಯವಿರುವ ಬಂಡವಾಳ ಹೂಡಿ ಪುನಶ್ಚೇತನಗೊಳಿಸಲು ಆಗ್ರಹ
ಭದ್ರಾವತಿಯಲ್ಲಿ ಸೋಮವಾರ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ತಾಲೂಕು ಶಾಖೆ ವತಿಯಿಂದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ವಿಐಎಸ್‌ಎಲ್-ಎಂಪಿಎಂ ಎರಡೂ ಕಾರ್ಖಾನೆಗಳ ಪುನಶ್ಚೇತನಗೊಳಿಸಲು ಆಗ್ರಹಿಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮಾ. ೨೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಕೈಬಿಡಬೇಕೆಂದು ಮತ್ತು ರಾಜ್ಯ ಸರ್ಕಾರಿ ಸ್ವಾಮ್ಯದ ಎಂಪಿಎಂ ಕಾರ್ಖಾನೆ ಪುನರ್ ಆರಂಭಿಸಬೇಕೆಂದು ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ನಗರದ ಕ್ರೈಸ್ತ ಧರ್ಮಗುರುಗಳು ಆಗ್ರಹಿಸಿದ್ದಾರೆ.
ಸೋಮವಾರ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ತಾಲೂಕು ಶಾಖೆ ವತಿಯಿಂದ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.
ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು ಅಗತ್ಯವಿರುವ ಬಂಡವಾಳ ತೊಡಗಿಸುವ ಜೊತೆಗೆ ದುಡಿಯುವ ಕೈಗಳಿಗೆ ಉದ್ಯೋಗ ನೀಡಬೇಕೆಂದು ಒತ್ತಾಯಿಸಿದರು. ಭವಿಷ್ಯದಲ್ಲಿ ಎರಡು ಕಾರ್ಖಾನೆಗಳು ಅಭಿವೃದ್ಧಿ ಹೊಂದುವಂತಾಗಲಿ ಎಂದು ಸಾಮೂಹಿಕವಾಗಿ ಪ್ರಾರ್ಥಿಸಿದರು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು.
ನ್ಯೂಟೌನ್ ಅಮಲೋದ್ಭವಿಮಾತೆ ದೇವಾಲಯದ ಧರ್ಮಗುರು ಲ್ಯಾನ್ಸಿ ಡಿಸೋಜ, ಗಾಂಧಿನಗರ ವೇಲಾಂಗಣಿ ಮಾತೆ ದೇವಾಲಯದ ಧರ್ಮಗುರು ಪಾದರ್ ಸ್ಟೀವನ್ ಡಿಸಾ, ಮಾವಿನಕೆರೆ ಕಿರಿಯ ಪುಷ್ಪ ಸಂತ ತೆರೇಸರ ದೇವಾಲಯದ ಧರ್ಮಗುರು ಪಾದರ್ ದಿವ್ಯ ಕರುಣೀಶ್ ಕ್ಯಾಪುಚಿನ್, ಕಾಗದನಗರದ ಸಂತ ಜೋಸೆಫರ ದೇವಾಲಯ ಧರ್ಮಗುರು ಡೊನೆಮಿಕ್ ಕ್ರಿಸ್ತರಾಜ್, ಹಿರಿಯೂರು ವಿನ್ನಿ ಮೈನರ್ ಸೆಮಿನರಿ ರೆಕ್ಟರ್ ಪಾದರ್ ಸಂತೋಷ್ ಪೆರೇರಾ, ಧರ್ಮಗುರು ಪಾದರ್ ಮಾರ್ಕ್ ಪೆಟ್ರಿಕ್ ಡಿಸಿಲ್ವ, ಜೇಡಿಕಟ್ಟೆ ಆಶಾಕಿರಣ ನಿರ್ದೇಶಕ ಪಾದರ್ ಪ್ರಕಾಶ್ ಪಿಂಟೋ, ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸಂಚಾಲಕ ಅಂತೋಣಿ ವಿಲ್ಸನ್, ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ಸೆಲ್ವರಾಜ್, ನಗರಸಭೆ ಸದಸ್ಯ ಜಾರ್ಜ್, ಲತಾ ರಾರ್ಬಟ್, ಜೆ. ಭಾಸ್ಕರ್, ಡೇವಿಸ್, ಸ್ಟೀಫನ್, ತಾಲೂಕಿನ ಎಲ್ಲಾ ಚರ್ಚ್‌ಗಳ ಧರ್ಮಗುರುಗಳು, ಫಾಸ್ಟರ್‌ಗಳು, ಸಭಾಪಾಲಕರು, ಧರ್ಮಭಗಿನಿಯರು, ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಕಾರ್ಮಿಕ ಮುಖಂಡರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.
No comments:
Post a Comment