ಭದ್ರಾವತಿ ಹಳೇನಗರ ಪುರಾಣ ಪ್ರಸಿದ್ದ, ಕ್ಷೇತ್ರ ಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಗುತ್ತಿಗೆ ಕಾರ್ಮಿಕರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಉರುಳು ಸೇವೆ ನಡೆಸಿದರು.
ಭದ್ರಾವತಿ, ಮಾ. ೨೮: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಇದೀಗ ಗುತ್ತಿಗೆ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ.
ಮಂಗಳವಾರ ಸಂಜೆ ಹಳೇನಗರ ಪುರಾಣ ಪ್ರಸಿದ್ದ, ಕ್ಷೇತ್ರ ಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉರುಳು ಸೇವೆ ನಡೆಸಿದರು. ಈಗಾಗಲೇ ಹಲವು ರೀತಿಯ ಹೋರಾಟಗಳನ್ನು ಕೈಗೊಂಡಿರುವ ಗುತ್ತಿಗೆ ಕಾರ್ಮಿಕರು ಹೋರಾಟದ ಒಂದು ಭಾಗವಾಗಿ ಧಾರ್ಮಿಕ ಆಚರಣೆಗಳನ್ನು ಸಹ ಕೈಗೊಳ್ಳುತ್ತಿದ್ದಾರೆ.
ಈ ಹಿಂದೆ ಸಹ ಕಾಯಂ ಕಾರ್ಮಿಕರು ಹೋರಾಟದ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿ ಉರುಳು ಸೇವೆ ನಡೆಸಿದ್ದರು. ಕೆಲವು ವರ್ಷಗಳ ಹಿಂದಿನ ಘಟನೆ ಇದೀಗ ಪುನಃ ಮರುಕಳುಹಿಸಿರುವುದು ವಿಶೇಷವಾಗಿದೆ.
ಗಣಹೋಮ-ಶ್ರೀ ಚೌಡೇಶ್ವರಿ ಅಮ್ಮನವರ ಮಹಾಪೂಜೆ:
ಮಾ.೩೧ರಂದು ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಟ್ರಾಫಿಕ್ ಇಲಾಖೆಯ ಅಧಿಕಾರಿಗಳು, ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರ ವತಿಯಿಂದ ಬೆಳಿಗ್ಗೆ ೯ ಗಂಟೆಗೆ ಗಣಹೋಮ, ಶ್ರೀ ಚೌಡೇಶ್ವರಿ ಅಮ್ಮನವರ ಮಹಾಪೂಜೆ ಮತ್ತು ೧೨ ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
No comments:
Post a Comment