ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿಜೆಪಿ ತಾಲೂಕು ಮಂಡಲ ಕಛೇರಿಯಲ್ಲಿ ಸೋಮವಾರ ವಿಧಾನಸಭಾ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.
ಭದ್ರಾವತಿ, ಮಾ. ೩೧ : ನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿಜೆಪಿ ತಾಲೂಕು ಮಂಡಲ ಕಛೇರಿಯಲ್ಲಿ ಸೋಮವಾರ ವಿಧಾನಸಭಾ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.
ಕಾರ್ಯಾಲಯದ ಉದ್ಘಾಟನೆ ಅಂಗವಾಗಿ ಧಾರ್ಮಿಕ ಆಚರಣೆಗಳು ಜರುಗಿದವು. ಈ ಹಿಂದೆ ಬಹಳ ವರ್ಷಗಳಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಬಾಡಿಗೆ ಕಟ್ಟಡದಲ್ಲಿ ಬಿಜೆಪಿ ತಾಲೂಕು ಮಂಡಲ ಕಛೇರಿ ಕಾರ್ಯ ನಿರ್ವಹಿಸುತ್ತಿತ್ತು. ಕಳೆದ ಕೆಲವು ತಿಂಗಳ ಹಿಂದೆ ಪಕ್ಷದ ಸ್ವಂತ ಜಾಗದಲ್ಲಿ ನೂತನ ಕಛೇರಿ ನಿರ್ಮಾಣಗೊಂಡಿದ್ದು, ಮೊದಲ ಬಾರಿಗೆ ನೂತನ ಕಛೇರಿಯಲ್ಲಿ ಚುನಾವಣಾ ಕಾರ್ಯಾಲಯ ಆರಂಭಿಸಲಾಗಿದೆ.
ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಗಸ್ವಾಮಿ, ಚನ್ನೇಶ್, ಉಪಾಧ್ಯಕ್ಷರಾದ ಜಯರಾಮ್, ಮಣಿ, ಅನ್ನಪೂರ್ಣ ಸಾವಂತ್, ಗೌರಮ್ಮ, ಕಾರ್ಯದರ್ಶಿಗಳಾದ ಚಂದ್ರು ದೇವರನರಸೀಪುರ, ಸರಸ್ವತಿ, ಕವಿತಾ ಸುರೇಶ್, ನಗರಸಭಾ ಸದಸ್ಯೆ ಶಶಿಕಲಾ ನಾರಾಯಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್ ಕದಿರೇಶ್, ಪಕ್ಷದ ಪ್ರಮುಖರಾದ ಪವಿತ್ರ ರಾಮಯ್ಯ, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಎಂ. ಮಂಜುನಾಥ್, ಮಂಗೋಟೆ ರುದ್ರೇಶ್, ಕವಿತಾ ರಾವ್, ರಾಮನಾಥ್ ಬರ್ಗೆ ಹಾಗು ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
No comments:
Post a Comment