ನಾಗಮ್ಮ ದಿವಂಗತ ಚೆನ್ನಬಸವಯ್ಯ
ಭದ್ರಾವತಿ, ಮಾ. ೯: ಹಳೇನಗರದ ಹೊಸ ಸೇತುವೆ ರಸ್ತೆಯ ಸಿದ್ದಾರೂಢ ನಗರದ ನಿವಾಸಿ, ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದಲಿಂಗಯ್ಯ(೮೯)ರವರ ತಾಯಿ ನಾಗಮ್ಮ ದಿವಂಗತ ಚೆನ್ನಬಸವಯ್ಯ(೮೯) ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.
ನಾಗಮ್ಮರವರಿಗೆ ಸಿದ್ದಲಿಂಗಯ್ಯ ಸೇರಿ ಮೂರು ಗಂಡು, ಒಂದು ಹೆಣ್ಣು ಒಟ್ಟು ನಾಲ್ವರು ಮಕ್ಕಳು ಅಪಾರ ಬಂಧು ಬಳಗವಿದೆ. ಗುರುವಾರ ಸಂಜೆ ಹನುಮಂತನಗರದ ವೀರಶೈವ ರುದ್ರಭೂಮಿಯಲ್ಲಿ ಮೃತರ ಅಂತ್ಯ ಸಂಸ್ಕಾರ ನೆರವೇರಿತು.
ಮೃತರ ನಿಧನವಾರ್ತೆ ತಿಳಿಯುತ್ತಿದ್ದಂತೆ ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆಯ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಆಗಮಿಸಿ ಕುಂಟುಂಬಕ್ಕೆ ಸಾಂತ್ವಾನ ಹೇಳಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಸುರೇಶಯ್ಯ, ಶಾಸಕರ ಸಹೋದರ ಬಿ.ಕೆ.ಜಗನ್ನಾಥ್, ತಾ.ಪಂ ಮಾಜಿ ಉಪಾಧ್ಯಕ್ಷ ನಂಜುಂಡೇಗೌಡ, ಪಡಿತರ ಸಂಘದ ಪದಾಧಿಕಾರಿಗಳು, ಸೇರಿದಂತೆ ಅನೇಕ ಮುಖಂಡರು ಸಂತಾಪ ಸೂಚಿಸಿದರು.
No comments:
Post a Comment