ಬೀಗಜಡಿದ ಸರ್ಕಾರಿ ಕಛೇರಿಗಳು
ಭದ್ರಾವತಿ ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸೇರಿದಂತೆ ಬಹುತೇಕ ಕಛೇರಿಗಳು ಸ್ತಬ್ದಗೊಂಡಿದ್ದವು.
ಭದ್ರಾವತಿ, ಮಾ. ೧ : ಸರ್ಕಾರಿ ನೌಕರರು ೭ನೇ ವೇತನ ಆಯೋಗ ಜಾರಿಗೆ ಹಾಗು ನೂತನ ಪಿಂಚಣಿ ಯೋಜನೆ(ಎನ್‌ಪಿಎಸ್) ರದ್ದುಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತಾಲೂಕಿನಲ್ಲಿ ಪೂರಕ ಸ್ಪಂದನೆ ವ್ಯಕ್ತವಾಯಿತು.
ತಾಲೂಕಿನ ಶಕ್ತಿ ಕೇಂದ್ರ ತಾಲೂಕು ಕಛೇರಿ ಮಿನಿವಿಧಾನಸೌಧ, ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸೇರಿದಂತೆ ಬಹುತೇಕ ಕಛೇರಿಗಳು ಸ್ತಬ್ದಗೊಂಡಿದ್ದವು. ಕೆಲವು ಕಛೇರಿಗಳಿಗೆ ಬೀಗ ಜಡಿಯಲಾಗಿತ್ತು. ಇನ್ನೂ ಕೆಲ ಕಛೇರಿಗಳು ಅಧಿಕಾರಿಗಳು, ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿದ್ದವು.
ಸರ್ಕಾರಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳು ಸಂಪೂರ್ಣವಾಗಿ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳು ಸಹ ಮುಚ್ಚಲ್ಪಟ್ಟಿದ್ದವು. ಸರ್ಕಾರಿ ಸೇವೆಗಳಿಗಾಗಿ ಜನರು ಪರದಾಡುವಂತಾಯಿತು. ಜನಸಾಮಾನ್ಯರಿಗೆ ಮುಷ್ಕರದ ಬಿಸಿ ತಟ್ಟಿತು.
ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಛೇರಿಯಲ್ಲಿ ನಿರ್ದೇಶಕರು ಸಭೆ ನಡೆಸಿ ದಿನದ ಬೆಳವಣಿಗೆಗಳನ್ನು ಗಮನಿಸಿದರು.
ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಛೇರಿಯಲ್ಲಿ ಬುಧವಾರ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ನಿರ್ದೇಶಕರು ಸಭೆ ನಡೆಸಿ ದಿನದ ಬೆಳವಣಿಗೆಗಳನ್ನು ಗಮನಿಸಿದರು.
No comments:
Post a Comment