ಭದ್ರಾವತಿ, ಮಾ. ೨೪ : ತಾಲೂಕಿನ ಶ್ರೀ ಛತ್ರಪತಿ ಶಿವಾಜಿ ಮರಾಠ ಬಾಂಧವರು ಹಾಗು ಜೀಜಾಮಾತಾ ಮಹಿಳಾ ಮಂಡಳಿ ವತಿಯಿಂದ ಮಾ.೨೫ರಂದು ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತ್ಯೋತ್ಸವ ಮತ್ತು ಬೃಹತ್ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಶ್ರೀ ಗೋಸಾಯಿ ಮಹಾ ಸಂಸ್ಥಾನ ಮಠ ಶ್ರೀ ಭವಾನಿ ಪೀಠದ ಶ್ರೀ ಮಂಜುನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಲಿದ್ದು, ಮರಾಠ ಸಮಾಜದ ಪ್ರಮುಖರಾದ ರಘುನಾಥರಾವ್ ಗಿಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳಿಗ್ಗೆ ೮.೩೦ಕ್ಕೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಂಡು ಲೋಯರ್ ಹುತ್ತಾ ಬಸ್ ನಿಲ್ದಾಣದವರೆಗೂ ನಡೆಯಲಿರುವ ಭವ್ಯ ಮೆರವಣಿಗೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ.
ವೇದಿಕೆ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ತನ್‌ಮಹಿ ಸಿಂಗಾರ್ ವಿಶೇಷ ಉಪನ್ಯಾಸ ನೀಡಲಿದ್ದು, ಸಂಸದ ಬಿ.ವೈ ರಾಘವೇಂದ್ರ, ವಿಧಾನಸಭಾ ಸದಸ್ಯ ಅಶೋಕ್ ನಾಯ್ಕ, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಮಾಜಿ ಶಾಸಕಿ ಶಾರದ ಪೂರ‍್ಯಾನಾಯ್ಕ, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಎಎಪಿ ಪಕ್ಷದ ಮುಖಂಡ ಮೆಡಿಕಲ್ ಆನಂದ್, ಮಾಜಿ ವಿಧಾನಪರಿಷತ್ ಸದಸ್ಯ ಆರ್.ಕೆ ಸಿದ್ದರಾಮಣ್ಣ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರಾದ ಜಿ. ಧರ್ಮಪ್ರಸಾದ್, ಟಿ. ಚಂದ್ರೇಗೌಡ, ಆರ್. ಕರುಣಾಮೂರ್ತಿ, ಕಾರ್ಯಪಾಲಕ ಅಭಿಯಂತರ ಸಂಪತ್ ಕುಮಾರ್ ಪಿಂಗ್ಳೆ, ತಹಸೀಲ್ದಾರ್ ಸುರೇಶ್ ಆಚಾರ್, ನಗರಸಭೆ ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ತಾಲೂಕಿನ ಮರಾಠ ಬಾಂಧವರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment