ಭದ್ರಾವತಿ, ಮಾ. 13: ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮರ ನೆಲಕ್ಕುರುಳಿ ಬಿದ್ದಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮರ ನೆಲಕ್ಕುರುಳಿ ಬಿದ್ದ ಪರಿಣಾಮ ಆಸ್ಪತ್ರೆ ವೈದ್ಯ ಡಾ. ಜ್ಞಾನಮೂರ್ತಿರವರ ಕಾರು ಜಖಂಗೊಂಡಿದ್ದು, ವಿದ್ಯುತ್ ತಂತಿ ಕತ್ತರಿಸಿ ಹೋಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿದ್ದು, ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
No comments:
Post a Comment