ಭದ್ರಾವತಿ, ಮಾ. 18: ವಿಜಯ ಸಂಕಲ್ಪ ಯಾತ್ರೆ ಶನಿವಾರ ಬೆಳಿಗ್ಗೆ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಆರಂಭಗೊಂಡಿತು.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ, ಪಕ್ಷದ ಹಿರಿಯ ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಕಲ್ಪ ಯಾತ್ರೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ನಂತರ ಹೊಸಮನೆ ಶಿವಾಜಿ ಸರ್ಕಲ್‌ವರೆಗೂ ಸಾಗಿತು.
ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
No comments:
Post a Comment