ಭದ್ರಾವತಿ, ಮಾ. ೧೯ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸುಮಾರು ೨೩೦ ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಸುಮಾರು ೬,೦೦೦ ರು. ಮೌಲ್ಯದ ೨೩೦ ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
No comments:
Post a Comment