ಭದ್ರಾವತಿ ತಾಲೂಕು ಪಂಚಾಯಿತಿ.
ಭದ್ರಾವತಿ, ಮಾ. ೧೬ : ಕಳೆದ ಸುಮಾರು ಒಂದೂವರೆ ವರ್ಷದಿಂದ ಜನಪ್ರತಿನಿಧಿಗಳ ಆಡಳಿತವಿಲ್ಲದಿದ್ದರೂ ಸಹ ಕಾರ್ಯಾಂಗ ತನ್ನ ಜವಾಬ್ದಾರಿ ಅರಿತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿಗೆ ಈ ಬಾರಿ ರಾಜ್ಯಮಟ್ಟದ ತೃತೀಯ ಅತ್ಯುತ್ಯಮ ತಾಲೂಕು ಪಂಚಾಯಿತಿ ಪುರಸ್ಕಾರ ಲಭಿಸಿದೆ.
ಈ ಹಿಂದೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೪೧ ಗ್ರಾಮ ಪಂಚಾಯಿತಿ, ೧೯ ತಾಲೂಕು ಪಂಚಾಯಿತಿ ಕ್ಷೇತ್ರಗಳಿದ್ದು, ಸರ್ಕಾರ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಘೋಷಣೆ ಮಾಡಿದ ನಂತರ ಪ್ರಸ್ತುತ ೩೯ ಗ್ರಾಮ ಪಂಚಾಯಿತಿ ಹಾಗು ೧೮ ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಕಳೆದ ಸುಮಾರು ಒಂದೂವರೆ ವರ್ಷದಿಂದ ಚುನಾವಣೆ ನಡೆಯದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲದಿದ್ದರೂ ಸಹ ಕಾರ್ಯಾಂಗ ತನ್ನ ಜವಾಬ್ದಾರಿ ಅರಿತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರ ನೇತೃತ್ವದಲ್ಲಿ ಸುಮಾರು ಒಂದೂವರೆ ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಇದೀಗ ರಾಜ್ಯದ ಗಮನ ಸೆಳೆದಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳ ಸೃಜನೆ, ಕಾಮಗಾರಿ ಮುಕ್ತಾಯ, ಜಿಯೋಟ್ಯಾಗ್, ಮಹಿಳೆಯರ ಭಾಗವಹಿಸುವಿಕೆ, ಸಾಮಾಜಿಕ ಲೆಕ್ಕಾ ತಪಾಸಣೆ, ಕಡತ ನಿರ್ವಹಣೆ ಸೇರಿದಂತೆ ಇನ್ನಿತರ ಕಾರ್ಯನಿರ್ವಹಣೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯಮಟ್ಟದ ತೃತೀಯ ಅತ್ಯುತ್ಯಮ ತಾಲೂಕು ಪಂಚಾಯಿತಿ ಪುರಸ್ಕಾರ ಲಭಿಸಿದೆ.
ರಮೇಶ್, ಕಾರ್ಯನಿರ್ವಹಣಾಧಿಕಾರಿ, ತಾಲೂಕು ಪಂಚಾಯಿತಿ, ಭದ್ರಾವತಿ.
ಪುರಸ್ಕಾರ ಲಭಿಸಿರುವ ಹಿನ್ನಲೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರು ಸಹಾಯಕ ನಿರ್ದೇಶಕರು(ಗ್ರಾ.ಉ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಸ್‌ಡಿಎಎ, ಡಿಇಓ, ಗ್ರಾ.ಪಂ. ಸಿಬ್ಬಂಧಿಗಳು, ತಾಂತ್ರಿಕ ಸಹಾಯಕರು, ಬಿಎಫ್‌ಟಿ ಸೇರಿದಂತೆ ಎಲ್ಲಾ ಸಿಬ್ಬಂಧಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಮೊದಲ ಬಾರಿಗೆ ತಾಲೂಕು ಪಂಚಾಯಿತಿಗೆ ರಾಜ್ಯಮಟ್ಟದ ತೃತೀಯ ಅತ್ಯುತ್ತಮ ತಾಲೂಕು ಪಂಚಾಯಿತಿ ಪುರಸ್ಕಾರ ಲಭಿಸಿರುವುದು ಸಂತಸ ತಂದಿದೆ. ಮಾ.೨೪ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ಸಾಧನೆಗೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.
-ರಮೇಶ್, ಕಾರ್ಯನಿರ್ವಹಣಾಧಿಕಾರಿ, ತಾಲೂಕು ಪಂಚಾಯಿತಿ, ಭದ್ರಾವತಿ.
No comments:
Post a Comment