ಮಾನವ ಸರಪಳಿ, ಜಾಥಾ ಮೂಲಕ ಜಾಗೃತಿ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ನಿರ್ಮಲ ಮಹಿಳಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮಾನವ ಸರಪಳಿ ಹಾಗೂ ಜಾಥಾ ಕಾರ್ಯಕ್ರಮಕ್ಕೆ ನಗರ ಪೊಲೀಸ್ ವೃತ್ತ ನಿರೀಕ್ಷಕ ಶಾಂತಿನಾಥ್ ಚಾಲನೆ ನೀಡಿದರು.
ಭದ್ರಾವತಿ, ಮಾ. ೯: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ನಿರ್ಮಲ ಮಹಿಳಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮಾನವ ಸರಪಳಿ ಹಾಗೂ ಜಾಥಾ ಕಾರ್ಯಕ್ರಮಕ್ಕೆ ನಗರ ಪೊಲೀಸ್ ವೃತ್ತ ನಿರೀಕ್ಷಕ ಶಾಂತಿನಾಥ್ ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ನಗರದ ರಂಗಪ್ಪ ವೃತ್ತದಲ್ಲಿ ಸುಮಾರು ೧೦ ನಿಮಿಷ ಮಾನವ ಸರಪಳಿ ನಿರ್ಮಿಸಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳ ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ವೀರಶೈವ ಸಭಾಭವನದವರೆಗೂ ಜಾಥಾ ನಡೆಸಲಾಯಿತು.
ನಂತರ ನಡೆದ ವೇದಿಕೆ ಕಾರ್ಯಕ್ರಮ ತಹಸೀಲ್ದಾರ್ ಸುರೇಶಚಾರ್ ಉದ್ಘಾಟಿಸಿದರು. ನಗರ ಪೊಲೀಸ್ ವೃತ್ತ ನಿರೀಕ್ಷಕ ಶಾಂತಿನಾಥ್ ಮಹಿಳೆಯರ ಸುರಕ್ಷತೆ, ಕಾನೂನಿನಲ್ಲಿ ಮಹಿಳೆಯರಿಗಿರುವ ಸೌಲಭ್ಯಗಳ ಕುರಿತು ಹಾಗು ಇಆರ್‌ಎಸ್‌ಎಸ್ ೧೧೨ ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದರು.
ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ, ಗಾಂಧಿನಗರ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರು ಸ್ಟೀಫನ್ ಡೆಸಾ, ನಿರ್ಮಲ ಆಸ್ಪತ್ರೆ ವ್ಯವಸ್ಥಾಪಕಿ ರೀಟಾ ವರ್ಗೀಸ್, ಸೈಂಟ್ ಚಾರ್ಲ್ಸ್ ಬೊರೋಮಿಯೋ ಸಂಸ್ಥೆ ಪ್ರಾಂತೀಯ ಸಮಾಜ ಸೇವಾ ಸಲಹೆಗಾರರಾದ ಸಿಸ್ಟರ್ ವಿನ್ಸಿ, ನಿರ್ಮಲ ಮಹಿಳಾ ಸೇವಾ ಕೇಂದ್ರದ ನಿರ್ದೇಶಕಿ ಸಿಸ್ಟರ್ ತೆರೇಸಾ, ಕಾರ್ಯಕರ್ತರಾದ ಜಯಂತಿ ರಾಘವೇಂದ್ರ ಸಗಾಯ, ಮೇರಿ ರಾಜು, ಕೌಸಲ್ಯ ತೆರೇಸಾ, ಸತ್ಯ ರವಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment